ಜೆಸಿಬಿ ಮುಂದೆ ಮಲಗಿ ನಿತ್ಯಾನಂದ ಒಳಕಾಡು ಪ್ರತಿಭಟನೆ: ಕಾಂಕ್ರೀಟ್ ರಸ್ತೆ ಅಗೆಯುವ ಪ್ರಕ್ರಿಯೆ ಸ್ಥಗಿತ - Mahanayaka
8:20 PM Wednesday 5 - February 2025

ಜೆಸಿಬಿ ಮುಂದೆ ಮಲಗಿ ನಿತ್ಯಾನಂದ ಒಳಕಾಡು ಪ್ರತಿಭಟನೆ: ಕಾಂಕ್ರೀಟ್ ರಸ್ತೆ ಅಗೆಯುವ ಪ್ರಕ್ರಿಯೆ ಸ್ಥಗಿತ

nithyananda
07/03/2023

ಉಡುಪಿ: ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮಾಡುವುದು ಸರಿಯಲ್ಲ ಎಂದು ನಗರ ಸಭೆ ಮಾಜಿ ಸದಸ್ಯ ನಿತ್ಯಾನಂದ ವಳಕಾಡು ದೂರಿದರು. ಈ ಸಂದರ್ಭ ಸ್ಥಳೀಯ ನಗರಸಭೆ ಸದಸ್ಯ ಗಿರೀಶ್ ಅಂಚನ್ ಮತ್ತು ನಿತ್ಯಾನಂದ ವಳಕಾಡು ನಡುವೆ ಮಾತಿನ ಚಕಮಕಿ ನಡೆಯಿತು.

ಐದು ದಿನಗಳಿಂದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿದ್ದು ನಿತ್ಯಾನಂದ ಒಳಕಾಡು ಎರಡು ದಿನದ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ನಗರ ಸಭೆಯ ಅಧಿಕಾರಿಗಳನ್ನು ಈ ಕುರಿತಾಗಿ ಗಮನ ಸೆಳೆಯಲಾಗಿತ್ತು. ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ ಇದೊಂದು ದುಂಧುವೆಚ್ಚದ ಹೆಚ್ಚಿದ ಕಾಮಗಾರಿ ಎಂದು ನಿತ್ಯಾನಂದ ಒಳಕಾಡು ದೂರಿದರು.

ಈ ಬಗ್ಗೆ ನಿತ್ಯಾನಂದ ಒಳಕಾಡು ನಗರಸಭೆ ಕಮಿಷನರ್ ಗಮನ ಸೆಳೆದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ. ಸದ್ಯಕ್ಕೆ ಕಾಂಕ್ರೀಟ್ ರಸ್ತೆ ಅಗೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ