ನಿವೇದಿತಾ ಗೌಡ ಮುಡಿಗೇರಿದ ‘ಮಿಸೆಸ್ ಇಂಡಿಯಾ’ ಪ್ರಶಸ್ತಿ

ಬಿಗ್ ಬಾಸ್ ಸೇರಿದಂತೆ ಹಲವು ಶೋಗಳ ಮೂಲಕ ಜನರ ಮೆಚ್ಚುಗೆ ಗಳಿಸಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.
ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರಿಂದ ಮಿಸೆಸ್ ಇಂಡಿಯಾ ಪ್ರಶಸ್ತಿ ಸ್ವೀಕರಿಸಿದ ನಿವೇದಿತಾ ಗೌಡ ಈ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕನ್ನಡದ ರಾಪರ್ ಚಂದನ್ ಶೆಟ್ಟಿಯ ಪತ್ನಿಯಾಗಿರುವ ನಿವೇದಿತಾ ಗೌಡ, ಸದ್ಯ ಕಲ್ಲರ್ಸ್ ಕನ್ನಡದ ಗಿಚ್ಚಿ ಗಿಲಿ ಗಿಲಿ ಶೋನಲ್ಲಿಯೂ ವಿಭಿನ್ನ ಪಾತ್ರಗಳನ್ನು ಮಾಡುತ್ತಿದ್ದಾರೆ.
ಬಿಗ್ ಬಾಸ್ ಮೂಲಕ ಜನರಿಗೆ ಪರಿಚಿತರಾಗಿದ್ದ ನಿವೇದಿತಾ ಗೌಡ ಸಾಮಾಜಿಕ ಜಾಲತಾಣಗಳಲ್ಲಿಯೂ ಸಕ್ರಿಯರಾಗಿದ್ದಾರೆ. ಪ್ರತಿನಿತ್ಯ ತಮ್ಮ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ, ರೀಲ್ಸ್ ಮೊದಲಾದ ಚಟುವಟಿಕೆಗಳನ್ನು ನಡೆಸುತ್ತಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka