ನೀವು ಮುತಾಲಿಕ್‌ನ ಬ್ಯಾನ್ ಮಾಡ್ತಿಲ್ಲ ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ: ಬಿಜೆಪಿ ವಿರುದ್ಧ ಮುತಾಲಿಕ್ ಕಿಡಿ
ಮಂಗಳೂರು: ನಿಷೇಧದ ನಡುವೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದು, ಈ ವೇಳೆ ಮುತಾಲಿಕ್ ಹಾಗೂ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರವೀಣ್ ಮನೆಗೆ ಹೋಗುತ್ತಿರುವಾಗ ಹೆಜಮಾಡಿಯಲ್ಲಿ ನನ್ನನ್ನು ಪೊಲೀಸರು ತಡೆದು ದ.ಕ. ಜಿಲ್ಲಾಧಿಕಾರಿ ಕೊಟ್ಟ ನಿಷೇದಾಜ್ಞೆ ಪತ್ರ ಕೈಗೆ ಕೊಟ್ಟಿದ್ದಾರೆ. ನೀವು ಮುತಾಲಿಕ್‌ನ ಬ್ಯಾನ್ ಮಾಡ್ತಿಲ್ಲ ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನ್ನನ್ನು ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಬಹುದಿತ್ತು. ರಾಜ್ಯದ ಬಿಜೆಪಿ ನಾಯಕರು ಹಿಂದೂ ವಿರೋಧಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka