ಮುಂದಿನ ವಿಧಾನ ಸಭೆ, ಲೋಕಸಭೆ ಚುನಾವಣೆ ಸಂಬಂಧ ಮಾಯಾವತಿ ಮಹತ್ವದ ಘೋಷಣೆ - Mahanayaka
12:12 PM Wednesday 5 - February 2025

ಮುಂದಿನ ವಿಧಾನ ಸಭೆ, ಲೋಕಸಭೆ ಚುನಾವಣೆ ಸಂಬಂಧ ಮಾಯಾವತಿ ಮಹತ್ವದ ಘೋಷಣೆ

mayawati
15/01/2023

ಲಕ್ನೋ: 2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಾರ್ಟಿ(BSP) ವರಿಷ್ಠೆ ಮಾಯಾವತಿ ಘೋಷಿಸಿದ್ದಾರೆ.

ತಮ್ಮ 67ನೇ ಜನ್ಮದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಕುರಿತು ಪ್ರತಿಕ್ರಿಯಿಸಿರುವ ಅವರು, ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು,  ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಾಗಲೆಲ್ಲಾ ಬಿಎಸ್‌ ಪಿ ಬಲ ಹೆಚ್ಚಿದೆ. ಆದರೆ, ಇವಿಎಂಗಳನ್ನು ಪರಿಚಯಿಸಿದ ನಂತರ ಫಲಿತಾಂಶಗಳು ಅನಿರೀಕ್ಷಿತವಾಗಿವೆ. ಈಗಾಗಲೇ ಹಲವು ದೇಶಗಳಲ್ಲಿ ಇವಿಎಂಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಹೂಡಿಕೆ ತರುವ ಹೆಸರಿನಲ್ಲಿ ಬಿಜೆಪಿ ಜನರನ್ನು ಮೂರ್ಖರನ್ನಾಗಿಸುತ್ತಿದೆ. ಜಾಗತಿಕ ಹೂಡಿಕೆದಾರರ ಶೃಂಗಸಭೆ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕುವ ತಂತ್ರವಾಗಿದೆ. ಉತ್ತರಾಖಂಡದಲ್ಲಿ ಬಿಜೆಪಿ ಕಾನೂನಿನ ಹೆಸರಿನಲ್ಲಿ ಜನರನ್ನು ಸ್ಥಳಾಂತಾರಿಸುತ್ತಿದೆ ಎಂದು ಆರೋಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ