ಚಂಪಾಷಷ್ಠಿ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನ್ಯಮತಿಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ: ಬ್ಯಾನರ್
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ.
ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ, ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತಿಯರ ವ್ಯಾಪಾರ ವಹಿವಾಟುಗಳನ್ನ ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ.
ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಹಿಂದೂಯೇತರಿಗೆ ಅವಕಾಶ ನೀಡಬಾರದು ಎಂದು ಕಳೆದ ಬಾರಿ ಕೂಡ ಸಾಕಷ್ಟು ವಿವಾದಗಳು ಸೃಷ್ಟಿಯಾಗಿತ್ತು. ಇದೀಗ ಮತ್ತೆ ಹಬ್ಬಗಳು ಜಾತ್ರೆಗಳು ಆರಂಭವಾಗುತ್ತಿದೆ. ಮತ್ತೆ ಇದೇ ವಿವಾದಗಳು ಆರಂಭಗೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka