ನಾಗರಿಕರನ್ನು ಗುರಿಯಾಗಿಸುವುದಕ್ಕೆ ಯಾವುದೇ ಸಮರ್ಥನೆ ಇಲ್ಲ: ಗ್ರೆನೇಡ್ ದಾಳಿಗೆ ಉಮರ್ ಅಬ್ದುಲ್ಲಾ ಖಂಡನೆ
ಶ್ರೀನಗರದ ಪ್ರವಾಸಿ ಸ್ವಾಗತ ಕೇಂದ್ರ ಮತ್ತು ಮಾರುಕಟ್ಟೆಯಲ್ಲಿ ಭಾನುವಾರ ನಡೆದ ಗ್ರೆನೇಡ್ ದಾಳಿಯನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಖಂಡಿಸಿದ್ದಾರೆ. ಮುಗ್ಧ ನಾಗರಿಕರನ್ನು ಗುರಿಯಾಗಿಸಲು ಯಾವುದೇ ಸಮರ್ಥನೆ ಇಲ್ಲ ಎಂದು ಅವರು ಹೇಳಿದ್ದಾರೆ.
ಶ್ರೀನಗರದಲ್ಲಿ ಅಮಾಯಕಅಂಗಡಿಕಾರರ ಮೇಲೆ ನಡೆದ ಗ್ರೆನೇಡ್ ದಾಳಿಯು “ತೀವ್ರ ಕಳವಳಕಾರಿ” ಎಂದು ಸಿಎಂ ಅಬ್ದುಲ್ಲಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಣಿವೆಯ ಕೆಲವು ಭಾಗಗಳಲ್ಲಿ ದಾಳಿಗಳು ಮತ್ತು ಎನ್‌ಕೌಂಟರ್ ಗಳು ಮೇಲುಗೈ ಸಾಧಿಸಿವೆ. ಶ್ರೀನಗರದ ‘ಸಂಡೇ ಮಾರ್ಕೆಟ್’ನಲ್ಲಿ ಮುಗ್ಧ ಅಂಗಡಿಕಾರರ ಮೇಲೆ ಗ್ರೆನೇಡ್ ದಾಳಿಯ ಇಂದಿನ ಸುದ್ದಿ ತೀವ್ರ ಕಳವಳಕಾರಿಯಾಗಿದೆ. ಮುಗ್ಧ ನಾಗರಿಕರನ್ನು ಗುರಿಯಾಗಿಸಲು ಯಾವುದೇ ಸಮರ್ಥನೆ ಇರಲು ಸಾಧ್ಯವಿಲ್ಲ” ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj