ನಿಷೇಧದಿಂದ ಪಾರಾದ SDPI?: “PFI—SDPI ನಡುವೆ ಯಾವುದೇ ಸಂಬಂಧವಿಲ್ಲ”!
ನವದೆಹಲಿ: ಎಸ್ ಡಿಪಿಐ ಹಾಗೂ ನಿಷೇಧಿತ ಪಿಎಫ್ ಐ ಸಂಘಟನೆಯ ನಡುವೆ ಯಾವುದೇ ಸಂಬಂಧ ಕಂಡು ಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿರುವುದಾಗಿ “ಇಂಡಿಯಾ ಟು ಡೇ” ವರದಿ ಮಾಡಿದೆ.
ಎಸ್ ಡಿಪಿಐ ಹಾಗೂ ಪಿಎಫ್ ಐ ನಡುವೆ ಯಾವುದೇ ಸಂಪರ್ಕವಿಲ್ಲ. ಎಸ್ ಡಿಪಿಐ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಎಸ್ ಡಿಪಿಐ ಕಡೆಯಿಂದ ಯಾವುದೇ ಲೋಪವಿಲ್ಲ ಎಂದು ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
2009ರ ಜೂನ್ 21ರಂದು ಎಸ್ ಡಿಪಿಐ ಪಕ್ಷವನ್ನು ಸ್ಥಾಪಿಸಲಾಗಿದೆ. ಇದನ್ನು ಏಪ್ರಿಲ್ 13, 2010ರಂದು ಭಾರತೀಯ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಲಾಗಿದೆ. ಈಗಾಗಲೇ ಎಸ್ ಡಿಪಿಐ ಕೇರಳ, ತಮಿಳುನಾಡು, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ಮುನ್ಸಿಪಲ್ ಕಾರ್ಪೋರೇಷನ್ ಗಳು ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು, ನೂರಾರು ಜನಪ್ರತಿನಿಧಿಗಳನ್ನು ಹೊಂದಿದೆ.
ವರದಿಯ ಪ್ರಕಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ನಿಷೇಧದಿಂದ ಪಾರಾಗಿದೆ. ಎಸ್ ಡಿಪಿಐ ರಾಜಕೀಯ ದೃಷ್ಠಿಕೋನವನ್ನು ಹೊಂದಿದೆ ಎನ್ನುವುದು ಸ್ಪಷ್ಟವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka