ಮಕ್ಕಳಿಗಾಗಿ ಇನ್ಸ್ಟಾ, ಫೇಸ್‌ಬುಕ್, ಟಿಕ್‌ಟಾಕ್ ಬ್ಯಾನ್: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ
16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಕಾನೂನನ್ನು ಸರ್ಕಾರ ಪರಿಚಯಿಸಲಿದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರಕಟಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಲ್ಬನೀಸ್, ಸಾಮಾಜಿಕ ಮಾಧ್ಯಮವು ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿದೆ ಎಂದು ಬಣ್ಣಿಸಿದರು. ಹೀಗಾಗಿ ನಿರ್ಣಾಯಕ ಕ್ರಮ ತೆಗೆದುಕೊಳ್ಳುವ ಸರ್ಕಾರದ ನಿರ್ಧಾರವನ್ನು ಒತ್ತಿ ಹೇಳಿದರು. ಹೊಸ ಶಾಸನವನ್ನು ಈ ವರ್ಷದ ಕೊನೆಯಲ್ಲಿ ಸಂಸತ್ತಿನಲ್ಲಿ ಪರಿಚಯಿಸಲಾಗುವುದು ಮತ್ತು ಅನುಮೋದಿಸಿದ್ರೆ 12 ತಿಂಗಳ ನಂತರ ಜಾರಿಗೆ ಬರಲಿದೆ ಅಂದರು.
ಜನಪ್ರಿಯ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್‌ಗಳಾದ ಮೆಟಾದ ಇನ್ಸ್ಟಾಗ್ರಾಮ್ ಮತ್ತು ಫೇಸ್‌ಬುಕ್, ಟಿಕ್‌ಟಾಕ್, ಎಕ್ಸ್ ಮತ್ತು ಸಂಭಾವ್ಯ ಯೂಟ್ಯೂಬ್ (ಆಲ್ಫಾಬೆಟ್ ಒಡೆತನದ) ಗೆ ನಿಷೇಧ ಅನ್ವಯಿಸುತ್ತದೆ. ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರ ಪ್ರಕಾರ, ಪೋಷಕರು ಒಪ್ಪಿಗೆ ನೀಡುವ ಮಕ್ಕಳಿಗೂ ಯಾವುದೇ ವಿನಾಯಿತಿ ಇರುವುದಿಲ್ಲ ಎಂದಿದ್ದಾರೆ.
ಮಹತ್ವದ ಬದಲಾವಣೆಯಲ್ಲಿ ನಿಷೇಧವನ್ನು ಜಾರಿಗೊಳಿಸುವ ಜವಾಬ್ದಾರಿ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್‌ಗಳ ಮೇಲೆ ಬೀಳುತ್ತದೆ. ಪೋಷಕರು ಅಥವಾ ಯುವ ಬಳಕೆದಾರರ ಮೇಲೆ ಜವಾಬ್ದಾರಿಯನ್ನು ಹಾಕುವ ಬದಲು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ತಮ್ಮ ಸೇವೆಗಳನ್ನು ಪ್ರವೇಶಿಸುವುದನ್ನು ತಡೆಯಲು ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಕಂಪನಿಗಳು ಪ್ರದರ್ಶಿಸಬೇಕು ಎಂದು ಸರ್ಕಾರ ಬಯಸುತ್ತದೆ ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj