ಕೆ.ಶಿವರಾಮ್ ಅವರ ಬಗ್ಗೆ ಯಾರೂ ಅಪಪ್ರಚಾರ ಮಾಡಬೇಡಿ: ಕೆ.ಶಿವರಾಮ್ ಅಳಿಯ ಪ್ರದೀಪ್ ಮನವಿ

ಬೆಂಗಳೂರು: ನಟ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಿಲ್ಲ, ಈ ಸಂಬಂಧ ಯಾರು ಕೂಡ ಅಪಪ್ರಚಾರ ಮಾಡಬಾರದು ಎಂದು ಕೆ.ಶಿವರಾಮ್ ಅವರ ಅಳಿಯ ಪ್ರದೀಪ್ ಮನವಿ ಮಾಡಿಕೊಂಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಶೇರ್ ಮಾಡಿಕೊಂಡಿರುವ ಅವರು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ ಅಷ್ಟೇ. ಆದರೆ ಕೆಲವೊಬ್ಬರು ಅಪಪ್ರಚಾರ ಮಾಡುತ್ತಿರುವುದು ಕುಟುಂಬಕ್ಕೆ ನೋವು ತರುತ್ತಿದೆ.
ಕೆ ಶಿವರಾಮ್ ಚಿಕಿತ್ಸೆಯಿಂದೆ ಚೇತರಿಸಿಕೊಳ್ಳುತ್ತಾರೆ. ಈ ಬಗ್ಗೆ ಯಾರು ಸುಳ್ಳು ಮಾಹಿತಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿಸಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಕೆ.ಶಿವರಾಮ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವಾರು ಗಣ್ಯರು ಹಾಗೂ ಸ್ನೇಹಿತರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಪ್ರದೀಪ್ ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth