ಟೋಯಿಂಗ್ ಮಾಡುವಾಗ ವಾಹನ ಮಾಲಿಕ ಸ್ಥಳದಲ್ಲೇ ಇದ್ದರೆ, ನೋ ಪಾರ್ಕಿಂಗ್ ಶುಲ್ಕ ಪಡೆದು ವಾಹನ ಬಿಟ್ಟುಕೊಡಬೇಕು | ಸಚಿವ ಆರಗ ಜ್ಞಾನೇಂದ್ರ ಸೂಚನೆ
ಬೆಂಗಳೂರು: ಪೊಲೀಸರು ನೋಪಾರ್ಕಿಂಗ್ ಸ್ಥಳದಲ್ಲಿರುವ ವಾಹನಗಳನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನ ಮಾಲಿಕರು ಸ್ಥಳದಲ್ಲಿಯೇ ಇದ್ದರೆ, ನೋ ಪಾರ್ಕಿಂಗ್ ಶುಲ್ಕವನ್ನು ಮಾತ್ರ ಪಡೆದು ವಾಹನವನ್ನು ಮಾಲಿಕರ ವಶಕ್ಕೆ ಬಿಟ್ಟುಕೊಡಬೇಕು ಎಂದು ಗೃಹ ಸಚಿವ ಆರಗಜ್ಞಾನೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ಕಿರುಕುಳ ಉಂಟಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಪೊಲೀಸರಿಗೆ ಸೂಚನೆ ನೀಡಿರುವ ಗೃಹಸಚಿವರು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ ಸಂಚಾರ ವಿಭಾಗದ ರವಿಕಾಂತೇಗೌಡ ಅವರ ಜೊತೆಗೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಮೊದಲು ವಾಹನ ಮಾಲಿಕರು ಸ್ಥಳದಲ್ಲಿದ್ದರೆ ಅವರ ಗಮನಕ್ಕೆ ತರಬೇಕು. ಮಾಲಿಕರ ಗಮನಕ್ಕೆ ತರಲು ಸೈರನ್ ಅಥವಾ ಹಾರ್ನ್ ಮಾಡಬೇಕು.ಟೋಯಿಂಗ್ ಮಾಡಬೇಕಾದ ಎಲ್ಲ ನಿಯಮಗಳನ್ನು ಚಾಚೂ ತಪ್ಪದೇ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಟೋಯಿಂಗ್ ಮಾಡಲಾಗುವ ವಾಹನಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನಗರ ಪ್ರದೇಶಗಳಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆಗಳೇ ಇಲ್ಲ. ಹೀಗಾಗಿ ವಾಹನ ಮಾಲಿಕರು ತಮ್ಮ ವಾಹನವನ್ನು ಎಲ್ಲಿಯೂ ಪಾರ್ಕ್ ಮಾಡಲಾಗದೇ ಸಂಕಷ್ಟಕ್ಕೀಡಾಗಿದ್ದಾರೆ. ಕೆಲವು ಪ್ರದೇಶಗಳಲ್ಲಿ ವಾಹನ ನಿಲ್ಲಿಸಿ ಕೆಲವೇ ನಿಮಿಷಗಳಲ್ಲಿ ವಾಹವ ಟೋಯಿಂಗ್ ವಾಹನದಲ್ಲಿರುತ್ತದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಬಹುತೇಕ ನಗರಗಳಲ್ಲಿ ಈ ಸಮಸ್ಯೆಗಳಿವೆ. ಮೊದಲು ಪ್ರತಿ ನಗರಗಳಲ್ಲಿಯೂ ವಾಹನ ಪಾರ್ಕಿಂಗ್ ಗೆ ಉತ್ತಮದ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಮುಂದಾಗಬೇಕು ಎನ್ನುವ ಒತ್ತಾಯಗಳು ಕೂಡ ಸಾರ್ವಜನಿಕರಿಂದ ಕೇಳಿ ಬಂದಿವೆ.
ಇನ್ನಷ್ಟು ಸುದ್ದಿಗಳು…
ತ್ರಿಸ್ಟಾರ್ ಹೊಟೇಲ್ ನಲ್ಲಿ 8 ತಿಂಗಳು ತಂಗಿದ | 25 ಲಕ್ಷ ರೂ. ಬಿಲ್ ಆದ ಬಳಿಕ ಆತ ಮಾಡಿದ್ದೇನು ಗೊತ್ತಾ?
ಗ್ಯಾಸ್, ತೈಲ ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದ ಶಾಸಕ ಅರವಿಂದ್ ಬೆಲ್ಲದ್!
ಗಂಡ, ಹೆಂಡತಿ ನಡುವೆ ರಾಜಿ ಪಂಚಾಯಿತಿ ವೇಳೆ ಮನ ಬಂದಂತೆ ಗುಂಡು ಹಾರಿಸಿದ ನಿವೃತ್ತ ಸೈನಿಕ | ಇಬ್ಬರು ಸಾವು
ಭಾಷಣದ ವೇಳೆ ಊಟಕ್ಕೆ ಮುಗಿಬಿದ್ದ ಮಹಿಳಾ ಕಾರ್ಯಕರ್ತೆಯರು | ಬೇಸರ ವ್ಯಕ್ತಪಡಿಸಿದ ದೇವೇಗೌಡರು
ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗ ಪತ್ತೆ
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು
ಮಹಿಳೆ ಜೊತೆಗೆ ಅಕ್ರಮ ಸಂಬಂಧ: ಕಾನ್ ಸ್ಟೇಬಲ್ ನ ಕೈ ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿತ