ನಿಲ್ಲದ ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸ್ಲೆರಿ ಬಾಟಲ್ ಹಿಡಿದು ಪ್ರತಿಭಟನೆ!! - Mahanayaka
11:48 AM Thursday 6 - February 2025

ನಿಲ್ಲದ ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸ್ಲೆರಿ ಬಾಟಲ್ ಹಿಡಿದು ಪ್ರತಿಭಟನೆ!!

chamarajanagar
22/11/2023

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ  76 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ  ಬಿಸ್ಲೇರಿ ನೀರಿನ ಬಾಟಲ್ ಹಿಡಿದು ಪ್ರದರ್ಶಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ  ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ  ಜಮಾಯಿಸಿದ  ಪ್ರತಿಭಟನಾನಿತರು   ಅಲ್ಲಿಂದ ಮೆರವಣಿಗೆ  ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ   ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸ್ಲೇರಿ ನೀರಿನ‌ಬಾಟಲ್ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ, ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,  ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ  ಕನ್ನಡಪರ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 76 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದುಇಂದು ಕೂಡ  ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ   ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿಯು ತಮಿಳುನಾಡಿನ ಪರವಾಗಿದ್ದು,  ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿದ್ದು, ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬತ್ತಿಹೋಗಿದ್ದು ಮುಂದಿನಗಳಲ್ಲಿ ಸರ್ಕಾರ ಜನರಿಗೆ ಬಿಸ್ಲೇರಿ ನೀರಿನ ಬಾಟಲ್ ನೀಡುತ್ತಿವೆ ಎಂದು ಆರೋಪಿಸಿ ನಾವೆಲ್ಲರೂ ಬಿಸ್ಲೇರಿ   ನೀರಿನ ಬಾಟಲು ಹಿಡಿದು ಪ್ರದರ್ಶಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.

ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ  ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರಕ್ಕೆ ನೈತಿಕತೆ ಇದ್ದರೆ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ