ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸಾವು: ಈದ್ ದಿನದಂದು ಕಾರ್ಯನಿರ್ವಹಿಸಿದ್ದಕ್ಕಾಗಿ ಶಾಲೆಗೆ ಶೋಕಾಸ್ ನೋಟಿಸ್

ಹರಿಯಾಣದ ಮಹೇಂದ್ರಗಢದಲ್ಲಿ ಗುರುವಾರ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಆರು ಮಕ್ಕಳು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಈದ್ ಹಬ್ಬದ ಕಾರಣ ರಜಾದಿನವಾಗಿದ್ದರೂ ಯಾಕೆ ಶಾಲೆಯನ್ನು ತೆರೆಯಲಾಗಿತ್ತು ಎಂದು ವಿವರ ನೀಡಿ ಎಂದು ಖಾಸಗಿ ಶಾಲೆಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಗುರುವಾರ ಬೆಳಿಗ್ಗೆ 8.30 ರ ಸುಮಾರಿಗೆ ಕನಿನಾದ ಉನ್ಹಾನಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸುಮಾರು 40 ಮಕ್ಕಳನ್ನು ಜಿಎಲ್ ಪಬ್ಲಿಕ್ ಶಾಲೆಗೆ ಕರೆದೊಯ್ಯುತ್ತಿದ್ದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಚಾಲಕ ಧರ್ಮೇಂದರ್ ನನ್ನು ಬಂಧಿಸಲಾಗಿದೆ. ಅವರು ಅತಿವೇಗದ ಚಾಲನೆ ಮಾಡುತ್ತಿದ್ದರು ಮತ್ತು ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಕುಡಿದಿದ್ದಂತೆ ತೋರುತ್ತದೆ ಎಂದು ಆರೋಪಿಸಲಾಗಿದೆ.
ಧರ್ಮೇಂದರ್ ಅವರಲ್ಲದೆ, ಶಾಲೆಯ ಪ್ರಾಂಶುಪಾಲೆ ದೀಪ್ತಿ ಮತ್ತು ಇನ್ನೋರ್ವ ಶಾಲಾ ಅಧಿಕಾರಿ ಹೋಶಿಯಾರ್ ಸಿಂಗ್ ಸೇರಿದಂತೆ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth