ಅಣ್ವಸ್ತ್ರ ಬಳಕೆ ಖಚಿತ: ದಾಳಿಯ ಭೀತಿಯಲ್ಲಿ ಪಾಕಿಸ್ತಾನ ರಕ್ಷಣ ಸಚಿವ ಹೇಳಿದ್ದೇನು?

ಇಸ್ಲಾಮಾಬಾದ್: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಸೋಮವಾರ ಹೇಳಿದ್ದಾರೆ.
ರಾಯಿಟರ್ಸ್ ಜೊತೆ ಮಾತನಾಡಿರುವ ಅವರು, ಭಾರತದ ದಾಳಿ ಸನ್ನಿಹಿತವಾಗಿದ್ದು, ನಾವು ನಮ್ಮ ಸೇನಾಪಡೆಗಳನ್ನು ಬಲಪಡಿಸಿದ್ದೇವೆ. ಏಕೆಂದರೆ ಸೇನಾ ಸಿದ್ಧತೆ ನಮಗೂ ಅನಿವಾರ್ಯವಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಉಗ್ರರ ದಾಳಿ ಘಟನೆ ಬಳಿಕ ಉಭಯ ರಾಷ್ಟ್ರಗಳ ನಡುವೆ ವಾಗ್ಯುದ್ಧಗಳು ಹೆಚ್ಚಾಗಿವೆ. ಭಾರತದ ದಾಳಿಯ ಸಾಧ್ಯತೆ ಕುರಿತು ಸರ್ಕಾರಕ್ಕೆ ಸೇನೆ ಮಾಹಿತಿ ನೀಡಿದೆ. ನಮ್ಮ ಅಸ್ತಿತ್ವಕ್ಕೆ ನೇರ ಅಪಾಯ ಎದುರಾದರೆ ಮಾತ್ರ ಅಣ್ವಸ್ತ್ರ ಉಪಯೋಗಿಸಲಾಗುವುದು ಎಂದು ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರ ಇದೆ ಎಂದು ಭಾರತ ಆರೋಪಿಸುತ್ತಿದೆ. ಆದರೆ, ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಭಾರತ ಈಗ ನಮ್ಮ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ. ಅದು ಖಂಡಿತವಾಗಿಯೂ ನಮ್ಮ ಮೇಲೆ ದಾಳಿ ಮಾಡಲಿದೆ. ಹೀಗಾಗಿ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: