ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ ಟೈಲರ್ ನ ಬರ್ಬರ ಹತ್ಯೆ! - Mahanayaka
6:24 PM Wednesday 5 - February 2025

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ ಟೈಲರ್ ನ ಬರ್ಬರ ಹತ್ಯೆ!

Kanhaiya Lal
29/06/2022

ರಾಜಸ್ಥಾನ:  ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ ಟೈಲರ್ ವೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ  ಉದಯಪುರದಲ್ಲಿ ನಡೆದಿದೆ.

ಉದಯಪುರದಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಕನ್ನಯ್ಯ ಲಾಲ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಕೆಲವು ದಿನಗಳ ಹಿಂದೆ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.

ಕನ್ನಯ್ಯ ಲಾಲ್ ನ್ನು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಕತ್ತಿ ಝಳಪಿಸಿದ ದುಷ್ಕರ್ಮಿಗಳು ಎಚ್ಚರಿಕೆಯ ಸಂದೇಶ ನೀಡಿದ್ದು, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆನ್ನಲಾಗಿದೆ.

ಘಟನೆಯ ಬಳಿಕ ರಾಜಸ್ಥಾನದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಒಂದು ತಿಂಗಳವರೆಗೂ ಸಿಆರ್‌ಪಿಸಿ ಕಾಯ್ದೆಯಡಿ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಲಾಗಿದೆ. ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಟಿ ಪವಿತ್ರ ಲೋಕೇಶ್ 3ನೇ ಮದುವೆಯ ವದಂತಿ: ಕಾನೂನು ಸಮರಕ್ಕೆ ಮುಂದಾದ ನಟಿ\

ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ಮನೆ ಮಾಲಿಕ ಸುಖ ನಿದ್ದೆಯಲ್ಲಿದ್ದ: ಹಸಿದು ಬಂದ ಆನೆ ಗೋಡೆಯನ್ನೇ ಒಡೆದು ಹಾಕಿತು!

ವಿದ್ಯಾರ್ಥಿನಿಯರ ತಾಯಂದಿರಿಗೆ ಅಶ್ಲೀಲ ಸಂದೇಶ ರವಾನಿಸಿದ ಶಿಕ್ಷಕ ಅಮಾನತು!

 

ಇತ್ತೀಚಿನ ಸುದ್ದಿ