ಕೆಲಸಕ್ಕೆ ಸೇರಿದ ದಿನವೇ ನರ್ಸ್ ಮೇಲೆ ಅತ್ಯಾಚಾರ, ಬರ್ಬರ ಹತ್ಯೆ!

unnao
01/05/2022

ಉನ್ನಾವೋ:  ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ವೊಬ್ಬರನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಉನ್ನಾವೋದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಯುವತಿ ನರ್ಸ್ ಆಗಿ ಅದೇ ದಿನ ಮೊದಲ ಬಾರಿಗೆ ಆಸ್ಪತ್ರೆಗೆ ಆಗಮಿಸಿದ್ದಳು.  ಅದೇ ದಿನ ಆಸ್ಪತ್ರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ.

ನರ್ಸ್ ಮೇಲೆ ಅತ್ಯಾಚಾರ ನಡೆಸಿ ಬಳಿಕ ನೇಣು ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೋಷಕರು ಈ ಸಂಬಂಧ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಸಿಂಗ್ ಹೋಮ್ ನ ನಿರ್ವಾಹಕ ಸೇರಿದಂತೆ ಮೂವರನ್ನು ಆರೋಪಿಗಳೆಂದು ಹೆಸರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ  ಉನ್ನಾವೂ ಎಸ್ ಪಿ ಶಶಿಶೇಖರ್ ಸಿಂಗ್ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಸ್ಸಿನಿಂದ  ಕೆಸರು ಹಾರಿದ್ದಕ್ಕೆ ಚಾಲಕನಿಗೆ ವ್ಯಕ್ತಿಯಿಂದ ಚಪ್ಪಲಿಯೇಟು!

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: ಸ್ವಲ್ಪ ತಡವಾಗಿದ್ದರೆ ನಡೆಯುತ್ತಿತ್ತು ಭಾರೀ ದುರಂತ!

ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್!

ಪರೋಟ ಸೇವಿಸಿದ ಬಾಲಕನ ದಾರುಣ ಸಾವು: ಪೋಷಕರಿಗೆ ಕಾದಿತ್ತು ಶಾಕಿಂಗ್ ನ್ಯೂಸ್!

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ವಿರೋಧಿಸಿದ್ದಕ್ಕೆ ರೈಲಿನಿಂದ ಕೆಳಗೆ  ಎಸೆದ ಪಾಪಿ!

ಇತ್ತೀಚಿನ ಸುದ್ದಿ

Exit mobile version