ನೂತನ ಸಚಿವರಿಗೆ ಖಾತೆ ಹಂಚಿಕೆ | ಹಲವು ಸಚಿವರ ಖಾತೆಗಳು ಅದಲು ಬದಲು - Mahanayaka
11:17 AM Thursday 12 - December 2024

ನೂತನ ಸಚಿವರಿಗೆ ಖಾತೆ ಹಂಚಿಕೆ | ಹಲವು ಸಚಿವರ ಖಾತೆಗಳು ಅದಲು ಬದಲು

21/01/2021

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ನೂತನ ಸಚಿವರಿಗೆ ಖಾತೆ ಹಂಚಲಿದ್ದು, ಈ ಹಿನ್ನೆಲೆಯಲ್ಲಿ ಹಲವು ಹಾಲಿ ಸಚಿವರ ಖಾತೆ ಬದಲಾವಣೆಯಾಗಿದ್ದು, ಇದರಿಂದಾಗಿ ಬಿಜೆಪಿಯೊಳಗೆ ಮತ್ತೆ ಅಸಮಾಧಾನ ಆರಂಭವಾಗಿದೆ.

 ನೂತನ ಸಚಿವರಿಗೆ ಹಂಚಲಾದ ಖಾತೆಗಳು

►ಎಸ್.ಅಂಗಾರ- ಮೀನುಗಾರಿಕೆ ಮತ್ತು ಬಂದರು

►ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ

►ಸಿಸಿ ಪಾಟೀಲ್- ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ

►ಸಿ.ಪಿ.ಯೋಗೇಶ್ವರ್-ಸಣ್ಣ ನೀರಾವರಿ ಖಾತೆ ನೀಡುವ ಸಾಧ್ಯತೆ ದಟ್ಟವಾಗಿದೆ

►ಎಂಟಿಬಿ ನಾಗರಾಜ್-ಅಬಕಾರಿ ಇಲಾಖೆ

►ಮುರುಗೇಶ್ ನಿರಾಣಿ-ಗಣಿ ಮತ್ತು ಭೂ ವಿಜ್ಞಾನ

►ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ

ನೂತನ ಸಚಿವರಿಗೆ ಖಾತೆ ಹಂಚಿಕೆಯ ಬೆನ್ನಲ್ಲೇಜೆ.ಸಿ. ಮಾಧುಸ್ವಾಮಿ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಯನ್ನು ಹೆಚ್ಚುವರಿಯಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ ಎಂದು ಹೇಳಲಾಗಿದೆ.

ಡಾ.ಕೆ.ಸುಧಾಕರ್ ಬಳಿ ಇದ್ದ ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಜೆ.ಸಿ. ಮಾಧುಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ಹೇಳಲಾಗಿದೆ.  ಆನಂದ್ ಸಿಂಗ್ ಬಳಿಯಿದ್ದ ಅರಣ್ಯ ಇಲಾಖೆಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದ್ದು, ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದೆ.

ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದೆ. ಆರ್.ಶಂಕರ್ ಗೆ ಪೌರಾಡಳಿತ, ಗೋಪಾಲಯ್ಯ ಅವರಿಗೆ ತೋಟಗಾರಿಕೆ ಮತ್ತು ಸಕ್ಕರೆ ಹಾಗೂ ನಾರಾಯಣ ಗೌಡ ಯುವಜನ ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ