ಒಡಿಶಾದಲ್ಲಿ ಬಿಸಿಲಿನ ತಾಪ ಹೆಚ್ಚಳ: ಜನರು ಹೈರಾಣು
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಒಡಿಶಾದಲ್ಲಿ ಮುಂದಿನ ಮೂರು ದಿನಗಳವರೆಗೆ ಸುಡುವ ಬಿಸಿ ವಾತಾವರಣ ಇದೆ ಎಂದು ಎಚ್ಚರಿಕೆ ನೀಡಿದೆ.
ಈ ಕುರಿತು ಐಎಂಡಿ ವಿಜ್ಞಾನಿ ಉಮಾಶಂಕರ್ ದಾಸ್ ಮಾತನಾಡಿ, ರಾಜ್ಯದ ಹಲವಾರು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆ ಇದೆ. ಇದು ಜೂನ್ 13 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಆದಾಗ್ಯೂ, ಅದರ ನಂತರ ತಾಪಮಾನದಲ್ಲಿ ಸ್ವಲ್ಪ ಕುಸಿತವನ್ನು ನಿರೀಕ್ಷಿಸಬಹುದು ಎಂದಿದ್ದಾರೆ.
ಇನ್ನು ಮತ್ತೊಬ್ಬ ಐಎಂಡಿ ಅಧಿಕಾರಿ ನರೇಶ್ ಕುಮಾರ್ ಮಾತನಾಡಿ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಮುಂದುವರೆದಿವೆ ಎಂದಿದ್ದಾರೆ.
ಬಿಸಿಗಾಳಿಯ ಪ್ರಭಾವವು ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಹರಡುತ್ತಿದೆ. ಮುಂದಿನ ಐದು ದಿನಗಳವರೆಗೆ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಮೇಲೆ ಬಿಸಿಗಾಳಿ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw