ಒಡಿಶಾ ರೈಲು ದುರಂತ: ಕೋಮುದ್ವೇಷದ ಪೋಸ್ಟ್ ಮಾಡಿದ ಮಹಿಳೆಯ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು - Mahanayaka
2:41 PM Saturday 14 - December 2024

ಒಡಿಶಾ ರೈಲು ದುರಂತ: ಕೋಮುದ್ವೇಷದ ಪೋಸ್ಟ್ ಮಾಡಿದ ಮಹಿಳೆಯ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

04/06/2023

ಒಡಿಶಾದ ಬಾಲಾಸೋರ್​ನಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ವಿಶ್ವದ ದೊಡ್ಡ ದೊಡ್ಡ ನಾಯಕರೇ ಕಣ್ಣೀರು ಹಾಕಿದ್ದಾರೆ.
ಈ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವತಃ ಹೇಳಿದ್ದಾರೆ.
ಈ ಘಟನೆಯನ್ನು ಹಿಡಿದುಕೊಂಡು ಕೆಲ ವಿಕೃತ ಮನಸ್ಸುಗಳು ಕೋಮು ದ್ವೇಷ ಸೃಷ್ಟಿಸುವ ಪ್ರಯತ್ನ ಮಾಡಿದ್ದವು. ಅದರಲ್ಲಿ ವಿಷಾದನೀಯ ಅಂದರೆ ದುರಂತಕ್ಕೆ ಮಸೀದಿ ಕಾರಣ ಎಂದು ತುಮಕೂರು ಮೂಲದವರು ಎನ್ನಲಾದ ಸುಮಲತಾ ಎಸ್​ ಎಂಬ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಇದೀಗ ವೈರಲ್ ಆಗುತ್ತಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ತುಮಕೂರು ಮೂಲದ ಮಹಿಳೆಯೊಬ್ಬರು ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದೇ ಕಾರಣ ಎಂದು ಅಲ್ಲಿದ್ದ ದೇಗುಲದ ಚಿತ್ರವನ್ನು ಎಡಿಟ್ ಮಾಡಿ ವಾಸ್ತವವನ್ನು ತಿರುಚಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಈ ರೀತಿ ಸುಳ್ಳು ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಸುಳ್ಳು ಸುದ್ದಿ ಬಗ್ಗೆ ಒಡಿಶಾ ಪೊಲೀಸರು ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ರೈಲು ದುರಂತಕ್ಕೆ ಹೆಸರಿನಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಯತ್ನಿಸುವವರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ