ಒಡಿಶಾ ರೈಲು ದುರಂತ: 100 ಕ್ಕೂ ಹೆಚ್ಚು ಶವಗಳ ಗುರುತು ಇನ್ನೂ ಪತ್ತೆಯಾಗಿಲ್ಲ..!
ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಮತ್ತೆ ಮೂವರು ಸಾವನ್ನಪ್ಪಿದ್ದು, ಅಧಿಕೃತ ಸಾವಿನ ಸಂಖ್ಯೆ 278 ಕ್ಕೇರಿದೆ. ಜೂನ್ 2 ರಂದು ನಡೆದ ಬಾಲಸೋರ್ ರೈಲು ಅಪಘಾತದಲ್ಲಿ 278 ಸಾವಿನ ಜೊತೆಗೆ 1,100 ಜನರು ಗಾಯಗೊಂಡಿದ್ದಾರೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಕೆಲವು ಶವಗಳನ್ನು ಎರಡು ಬಾರಿ ಎಣಿಸಲಾಗಿದೆ ಎಂದು ಹೇಳಿದೆ.
ಖುರ್ದಾ ರೋಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಿಂಕೇಶ್ ರೇ ಮಾತನಾಡಿ, 278 ಶವಗಳಲ್ಲಿ 177 ಶವಗಳನ್ನು ಗುರುತಿಸಲಾಗಿದೆ. ಇನ್ನೂ 101 ಶವಗಳನ್ನು ಗುರುತಿಸಬೇಕಾಗಿದೆ. ಹಾಗೆಯೇ ವಾರಸುದಾರರಿಲ್ಲದ ಶವಗಳನ್ನು ಆರು ಪ್ರತ್ಯೇಕ ಆಸ್ಪತ್ರೆಗಳಲ್ಲಿ ಇರಿಸಲಾಗಿದೆ ಎಂದಿದ್ದಾರೆ.
ಗಾಯಗೊಂಡ 1,100 ಮಂದಿಯಲ್ಲಿ 200 ಕ್ಕಿಂತ ಹೆಚ್ಚಿನ ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇನ್ನು ಕಾಣೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ ಗಢ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ರೈಲ್ವೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw