ಒಡಿಶಾದಲ್ಲಿ ರೈಲು ಅಪಘಾತ: 50 ಕ್ಕಿಂತಲೂ ಹೆಚ್ಚು ಮಂದಿ ಸಾವು
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದು ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಲ್ಲಿ 179 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಒಡಿಶಾ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಸುಧಾಂಶು ಸಾರಂಗಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ರೈಲಿನೊಳಗೆ ಸಿಕ್ಕಿಬಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚುವ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw