ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಚಿಕ್ಕಮಗಳೂರು: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಕಳಸ ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ(72) ಮೃತ ದುರ್ದೈವಿಯಾಗಿದ್ದಾರೆ. ಕಳಸದಿಂದ ಸುಮೇದ್ ಶಿಖರ್ಜಿಗೆ 110 ಜನರು ಯಾತ್ರೆ ಹೊರಟಿದ್ದರು. ಇವರು ಒಡಿಶಾ ರೈಲು ಅಪಘಾತದ ವೇಳೆ ಪಾರಾಗಿದ್ದರು.
ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೆಷನ್ ಧರ್ಮಪಾಲಯ್ಯ ಅವರಿಗೆ ಹೃದಯಾಘಾತವಾಗಿದ್ದು, ಅವರು ಮೃತಪಟ್ಟಿದ್ದಾರೆ. ಇದೀಗ ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಶವ ಪರೀಕ್ಷೆಗಾಗಿ ಸಂಬಂಧಿಕರು ಕಾಯುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw