ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯೊಳಗೆ ಒಬ್ಬಂಟಿಯಾಗಿತ್ತು 3 ವರ್ಷದ ಮಗು! - Mahanayaka
6:58 PM Wednesday 10 - September 2025

ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯೊಳಗೆ ಒಬ್ಬಂಟಿಯಾಗಿತ್ತು 3 ವರ್ಷದ ಮಗು!

bangalore
17/09/2021

ಬೆಂಗಳೂರು: ಒಂದೇ ಕುಟುಂಬದ ಐವರು ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆತಂಕಕಾರಿ ಘಟನೆಯೊಂದು ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ  ತಿಗಳರ ಪಾಳ್ಯದ ಮನೆಯೊಂದರಲ್ಲಿ ನಡೆದಿದ್ದು, ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.


Provided by

ಸ್ಥಳೀಯ ಪತ್ರಿಕೆಯೊಂದರ ಸಂಪಾದಕ ಹಾಗೂ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದ್ದು, 50 ವರ್ಷ ವಯಸ್ಸಿನ ಭಾರತಿ, 33 ವರ್ಷದ ಸಿಂಚನ, 30 ವರ್ಷದ ಸಿಂಧುರಾಣಿ, 27 ವರ್ಷದ ಮಧುಸಾಗರ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು. 9 ತಿಂಗಳ ಮಗುವನ್ನು ಸಾಯಿಸಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ 3 ವರ್ಷದ ಮಗು ಮನೆಯೊಳಗೆ ಇದ್ದು ಆಹಾರವಿಲ್ಲದೇ ನಿತ್ರಾಣಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

2ರಿಂದ 3ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಬಲಿಯಾಗಿದೆ ಎಂದು ಹೇಳಲಾಗಿದೆ. ಸದ್ಯ  3 ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಘಟನಾ ಸ್ಥಳಕ್ಕೆ ಬ್ಯಾಡರ ಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಇನ್ನಷ್ಟು ಸುದ್ದಿಗಳು…

ಶಾರ್ಟ್ಸ್, ಟೀಶರ್ಟ್ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ | ಆ ಬಳಿಕ ಪರೀಕ್ಷಾ ಕೇಂದ್ರದಲ್ಲಿ ನಡೆದದ್ದೇನು ಗೊತ್ತಾ?

ಸಿಲಿಕಾನ್ ಸಿಟಿ ಫ್ಲೈಓವರ್ ನಲ್ಲಿ ಆಕ್ಸಿಡೆಂಡ್ ಆದ ಜಾಗದಲ್ಲಿಯೇ ಕಾರು ನಿಲ್ಲಿಸಿ ಯುವಕ, ಯುವತಿಯರ ಡಾನ್ಸ್!

ಮೋದಿಜಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದವರಿಗಿಂತ ಉದ್ಯೋಗ ಕೇಳಿದವರ ಸಂಖ್ಯೆಯೇ ಹೆಚ್ಚು!

ಅತ್ಯಾಚಾರ ಯತ್ನ ವಿಫಲವಾದಾಗ ವೃದ್ಧೆಯನ್ನು ಕೊಂದು ಮೃತದೇಹದ ಮೇಲೆಯೇ ಹೇಯ ಕೃತ್ಯ

ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಕಾರು!

ಯಾದಗಿರಿ ಪ್ರಕರಣಕ್ಕೆ ತಿರುವು: ಮಹಿಳೆಯ ಮೇಲೆ ಹಲ್ಲೆ ಮಾತ್ರವಲ್ಲ, ಸಾಮೂಹಿಕ ಅತ್ಯಾಚಾರವೂ ನಡೆದಿತ್ತು!

ಇತ್ತೀಚಿನ ಸುದ್ದಿ