ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿಯಿಂದ ಪರಿಶೀಲನಾ ಸಭೆ
ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಕೋವಿಡ್ ಪರಿಸ್ಥಿತಿಯ ಕುರಿತಂತೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯವು ಈಗಾಗಲೇ ಒಮಿಕ್ರಾನ್ ಕೋವಿಡ್ ರೂಪಾಂತರ, ಸಾಮಾನ್ಯ ಕೊರೊನಾಗಿಂತ ಮೂರು ಪಟ್ಟು ವೇಗವಾಗಿ ಹರಡಲಿದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೇ ಕೋವಿಡ್ ಪೀಡಿತರು, ಆಸ್ಪತ್ರೆಯ ಮೂಲಸೌಕರ್ಯ, ಸಿಬ್ಬಂದಿ, ಮುಂತಾದ ಮಾಹಿತಿಯನ್ನು ಪರಿಶೀಲನೆ ನಡೆಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ.
ಸ್ಥಳೀಯ ಮಟ್ಟದಲ್ಲಿ ಕೋವಿಡ್ ಹರಡದಂತೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಸ್ಥಳೀಯ ಮಟ್ಟದಲ್ಲಿ ಸೋಂಕು ಕಾಣಿಸಿಕೊಂಡರೆ, ಅದನ್ನು ಇತರ ಪ್ರದೇಶಗಳಿಗೆ ಹರಡದಂತೆ ತಡೆಯಲು ಕಾರ್ಯತಂತ್ರ ರೂಪಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತಾಂತರ ನಿಷೇಧ ಕಾಯ್ದೆಯ ನಡುವೆಯೇ ಶುರುವಾಯ್ತು ಧರ್ಮಾಂಧರ ಉಪಟಳ: 160 ವರ್ಷ ಹಳೆಯ ಚರ್ಚ್ ಧ್ವಂಸ
ಕರ್ನಾಟಕಕ್ಕೆ ತಾಕತ್ತಿದ್ದರೆ ಎಂಇಎಸ್ ಬ್ಯಾನ್ ಮಾಡಲಿ: ಸಂಜಯ್ ರಾವತ್
ಮತಾಂತರ ನಿಷೇಧ ಒಪ್ಪಿಕೊಳ್ಳಿ; ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ | ಬಿ.ಎಸ್.ಯಡಿಯೂರಪ್ಪ
ದಕ್ಷಿಣ ಆಫ್ರಿಕಾದಲ್ಲಿ ಏಕಾಏಕಿ ಇಳಿಕೆಯಾದ ಒಮಿಕ್ರಾನ್ ಪ್ರಕರಣ: ತಜ್ಞರು ಹೇಳಿದ ಅಚ್ಚರಿಯ ಸಂಗತಿ ಏನು ಗೊತ್ತಾ?
ಅರ್ಚಕರಿಗೆ ಸಿಹಿ ಸುದ್ದಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ!
ಮಂಗಳೂರು: ಮೀನುಗಾರನನ್ನು ತಲೆಕೆಳಗಾಗಿಸಿ ನೇತುಹಾಕಿ ದೌರ್ಜನ್ಯ: ವಿಡಿಯೋ ವೈರಲ್