ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: 98 ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್ - Mahanayaka
12:36 AM Wednesday 5 - February 2025

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: 98 ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

egg
09/11/2024

ಬೆಂಗಳೂರು: ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಷನ್ ನಿಂದ ನಾಲ್ಕು ಸೇರಿ ವಾರಕ್ಕೆ 6 ಮೂಟ್ಟೆಗಳನ್ನು ನೀಡಲು ಸರ್ಕಾರ ಕ್ರಮಕೈಗೊಂಡಿದೆ.

ಆದರೆ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವಲ್ಲಿಯೂ ಅಧಿಕಾರಿಗಳು ವಿಫಲವಾಗಿದ್ದು, ಈ ನಿಟ್ಟಿನಲ್ಲಿ ಕರ್ತವ್ಯ ಲೋಪದಡಿ ಶಾಲಾ ಶಿಕ್ಷಣ ಇಲಾಖೆ 98 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

ಅಜಿಂ ಪ್ರೇಮ್ ಜಿ ಫೌಂಡೆಷನ್ ಇತ್ತೀಚೆಗೆ ನಡೆಸಿದ ಮೌಲ್ಯಮಾಪನದಲ್ಲಿ ನಾಲ್ಕು ವಿಭಾಗಗಳ 357 ಶಾಲೆಗಳಿಗೆ ಭೇಟಿ ನೀಡಿದಾಗ 66 ಶಾಲೆಗಳು ಈವರೆಗೂ ಮೊಟ್ಟೆ ವಿತರಿಸಿಲ್ಲ ಎಂದು ತಿಳಿದುಬಂದಿದೆ.

ಫೌಂಡೇಷನ್ ಪ್ರತಿನಿಧಿಗಳು ಸಿದ್ಧಪಡಿಸಿರುವ ವರದಿ ಆಧರಿಸಿ ಅನುಷ್ಠಾನದ ಹೊಣೆ ಸಮರ್ಪಕವಾಗಿ ನಿಭಾಯಿಸದ 50 ಸಿಬ್ಬಂದಿಗಳು ಹಾಗೂ ಪಿಎಂ ಪೋಷಣ್ ಅಭಿಯಾನದ 48 ಸಹಾಯಕ ನಿರ್ದೇಶಕರು ಸೇರಿ 98 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ