ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಬ್ಲ್ಯಾಕ್ ಫಂಗಸ್ ಗೆ ಮೂವರು ಬಲಿ - Mahanayaka

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಬ್ಲ್ಯಾಕ್ ಫಂಗಸ್ ಗೆ ಮೂವರು ಬಲಿ

black fungus
28/05/2021

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ಬ್ಲ್ಯಾಕ್ ಫಂಗಸ್ ನಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ 55 ವರ್ಷ ವಯಸ್ಸಿನ ನೋಣಯ್ಯ ಪೂಜಾರಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಮೂಲದ ರೋಗಿಗಳು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 5 ಮಂದಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಹೊಸತಾಗಿ ಮತ್ತೆ 5 ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 25 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದ್ದು,ಈವರಗೆ ಜಿಲ್ಲೆಯಲ್ಲಿ 30 ಪ್ರಕರಣಗಳು ಪತ್ತೆಯಾಗಿದೆ.

ಇತ್ತೀಚಿನ ಸುದ್ದಿ