ಒಂದೇ ಕುಟುಂಬದ ಐವರ ಬರ್ಬರ ಹತ್ಯೆ: ಮಕ್ಕಳು ಎಂದೂ ನೋಡದ ಕೊಚ್ಚಿ ಹಾಕಿದರು!
ಮಂಡ್ಯ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಗೈದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ನಡೆದಿದೆ.
26 ವರ್ಷ ವಯಸ್ಸಿನ ಲಕ್ಷ್ಮೀ, 12 ವರ್ಷದ ರಾಜ್, 7 ವರ್ಷದ ಕೋಮಲ್, 4 ವರ್ಷದ ಕುನಾಲ್ ಹಾಗೂ 8 ವರ್ಷದ ಗೋವಿಂದ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ.
ಹತ್ಯೆಗೀಡಾದವರೆಲ್ಲ ಒಂದೇ ಕುಟುಂಬದವರಾಗಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದು, ಘಟನೆಗೆ ಕೆ.ಆರ್.ಎಸ್ ಗ್ರಾಮವೇ ಬೆಚ್ಚಿ ಬಿದ್ದಿದೆ.
ಘಟನೆಗೆ ಕಾರಣಗಳೇನು? ಹತ್ಯೆ ಗೈದಿರುವವರು ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಕೆ.ಆರ್.ಎಸ್. ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪತ್ನಿಯ ಅಧಿಕಾರ ಚಲಾಯಿಸುತ್ತಿರುವ ಗಂಡ: ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಆಕ್ರೋಶ
ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ
ಶಾಲೆ ಸರಸ್ವತಿ ಮಂದಿರ, ತಾಲಿಬಾನ್ ಮಾಡಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್