ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ! - Mahanayaka

ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ!

car
07/08/2022

ಹುಬ್ಬಳ್ಳಿ: ಕಾರು  ಅಪಘಾತದಲ್ಲಿ ಒಂದೇ ಕುಟುಂಬದ ಮೂರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ನಡೆದಿದೆ.


Provided by

ಹನಮಂತಪ್ಪ ಬೇವಿನಕಟ್ಟ, ರೇಣುಕಾ ಹಾಗೂ ರವೀಂದ್ರ ಎಂಬವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಗೆ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಹೇಳಲಾಗುತ್ತಿದೆ. ಜಿಗಳೂರ ಗ್ರಾಮದ ದರ್ಗಾ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ದರ್ಗಾಕ್ಕೆ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.


Provided by

ಘಟನೆ ಸಂಬಂಧ ಕುಂದಗೋಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ