10:43 PM Wednesday 12 - March 2025

ಒಂದೇ ಮನೆಯ ಐವರನ್ನು ಹತ್ಯೆ ಮಾಡಿ ಮನೆಗೆ ಬೆಂಕಿ ಇಟ್ಟ ಪಾಪಿಗಳು!

prayagraj
23/04/2022

ನವದೆಹಲಿ: ಒಂದೇ ಕುಟುಂಬದ ಐವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ, ಮನೆಗೆ ಬೆಂಕಿ ಇಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ.

ವಿಪರೀತ ಸೆಖೆಯ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಮನೆಯಿಂದ ಹೊರಗೆ ಮಲಗಿದ್ದರು ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಮಲಗಿದ್ದವರನ್ನು ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಐವರನ್ನು ಹತ್ಯೆ ಮಾಡಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಮನೆಗೆ ಬೆಂಕಿ ಹತ್ತಿಕೊಂಡು ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದ್ದು,  ಈ ವೇಳೆ ಸ್ಥಳೀಯರು ಮನೆ ಬಳಿಗೆ ಓಡಿ ಬಂದಾಗ ಐವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಇನ್ನೂ ಸದ್ಯ ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಕೊಲೆಯ ಹಿಂದಿನ ಉದ್ದೇಶ ಬಹಿರಂಗವಾಗಲಿದೆ ಎಂದು ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯಾವ ಅಪರಾಧಕ್ಕಾಗಿ ಬೆದರಿಕೆ ಹಾಕುತ್ತಿದ್ದೀರಿ?: ಶಾಸಕ ರಘುಪತಿ ಭಟ್ ಗೆ ಹಿಜಾಬ್ ಪರ ವಿದ್ಯಾರ್ಥಿನಿ ಪ್ರಶ್ನೆ

ಅವಳಿ ಮಕ್ಕಳಿಗೆ ಹಾಲುಣಿಸುತ್ತಿದ್ದ ವೇಳೆ ಕುಸಿದುಬಿದ್ದು ತಾಯಿ ಸಾವು

ಸಿನಿಮಾದಲ್ಲಿ ಕುಡಿಯೋದು ಸೇದುವುದು ತಪ್ಪಾದರೆ, ಅನುಮತಿ ನೀಡಿರುವ ಸರ್ಕಾರ ಸರಿಯೇ? | ನಟ ಉಪೇಂದ್ರ ಪ್ರಶ್ನೆ

ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಬೈಕ್ ನಲ್ಲಿ ಜಾಲಿ ರೈಡ್: ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ

Exit mobile version