ಒಂದೇ ನಂಬರ್ ನ ನಾಲ್ಕು ಬಸ್ ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು!
ಬೆಂಗಳೂರು: ಒಂದೇ ನಂಬರ್ ನ 4 ಬಸ್ ಗಳನ್ನು ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ನಡೆಸಿದ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಲ್ಕು ಬಸ್ ಗಳಿಗೂ ಒಂದೇ ನಂಬರ್ ಪ್ಲೇಟ್ ಗಳನ್ನು ಅಳವಡಿಸುವ ಮೂಲಕ ತೆರಿಗೆ ವಂಚಿಸಿ ಈ ಬಸ್ ಗಳು ಸಂಚರಿಸುತ್ತಿದ್ದವು ಎಂದು ಹೇಳಲಾಗಿದೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ., ಸುರೇಶ್ ಜಿ.ಎನ್., ಸುಧೀರ್ ಬಾಬು ಟಿ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಮಾಹಿತಿಗಳ ಪ್ರಕಾರ ಸುಮಾರು 10 ಲಕ್ಷ ರೂ. ತೆರಿಗೆಯನ್ನು ವಂಚಿಸಿ ಒಂದೇ ನಂಬರ್ ನ್ನು ಬಳಸಿಕೊಂಡು ನಾಲ್ಕು ಬಸ್ ಗಳು ಸಂಚರಿಸುತ್ತಿದ್ದವು ಎಂದು ಹೇಳಲಾಗಿದೆ. ಇನ್ನೂ ಘಟನೆ ಸಂಬಂಧ ಅಧಿಕಾರಿಗಳು ದೂರು ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನಷ್ಟು ಸುದ್ದಿಗಳು…
ಕಿಟಕಿಯಲ್ಲಿ ನೇತಾಡುತ್ತಾ ಲಸಿಕೆ ಪಡೆದ ವ್ಯಕ್ತಿ | “ಶಾರ್ಟ್ ಕಟ್ ಲಸಿಕೆ” ವಿಡಿಯೋ ವೈರಲ್
ತಮಿಳುನಾಡಿನಂತೆ ಕರ್ನಾಟಕದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗುತ್ತಾ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ಚಲಿಸುತ್ತಿದ್ದ ಬಸ್ಸಿನ ಮೇಲೆ ಬಿದ್ದ ತೆಂಗಿನ ಮರ | ಕ್ಷಣ ಮಾತ್ರದಲ್ಲೇ ಮರದಲ್ಲಿದ್ದ ಎಳೆನೀರು ಖಾಲಿ!
ಕಾಬುಲ್ ನ ಅಮ್ಯೂಸ್ಮೆಂಟ್ ಪಾರ್ಕ್ ಗೆ ನುಗ್ಗಿ ಮಕ್ಕಳ ಆಟಿಕೆ ಕಾರಿನಲ್ಲಿ ಆಟವಾಡಿದ ಉಗ್ರರು
ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆ | ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ
ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು