“ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು” ಎಂದು ಭಗವಾನ್ ಹೇಳಿದ್ದೇಕೆ?
ಮೈಸೂರು: ತಮಿಳರು ಹೋರಾಟ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳು ತಮಿಳಿನಲ್ಲಿ ನಡೆಯುವಂತೆ ಮಾಡಿದರು. ಆದರೆ ಕರ್ನಾಟಕದಲ್ಲಿ ಇನ್ನೂ ಇಂತಹ ಹೋರಾಟ ನಡೆದಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು ಎಂದು ಸಾಹಿತಿ ಕೆ.ಎಸ್.ಭಗವಾನ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು “ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಬೇಕು” ಎಂದು ಆಗ್ರಹಿಸುತ್ತಾ, ಈ ಬೇಸರದ ನುಡಿಗಳನ್ನಾಡಿದರು.
ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಮೇಕೆದಾಟು ಯೋಜನೆ ವಿರುದ್ಧ ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಯೋಜನೆಯ ಜಾರಿಗೆ ಆಗ್ರಹಿಸಿ ರಾಜಕೀಯ ಪಕ್ಷಗಳು ಒಂದಾಗಿ ಕೇಂದ್ರದ ಜೊತೆಗೆ ಇನ್ನೂ ಚರ್ಚಿಸಿಲ್ಲ ಎಂದು ಕೆ.ಎಸ್.ಭಗವಾನ್ ವಿಷಾದ ವ್ಯಕ್ತಪಡಿಸಿದರು.
ಇನ್ನಷ್ಟು ಸುದ್ದಿಗಳು…
ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ
ಅಶ್ಲೀಲ ಚಿತ್ರ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್
ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಚಿತ್ರೀಕರಣ: ಯುವತಿ ಕಿರುಚಿದಾಗ ಆರೋಪಿ ಪರಾರಿ
ಪತಿವ್ರತೆ ಎಂದು ಸಾಬೀತು ಪಡಿಸಲು ಮಹಿಳೆಯನ್ನು ಕುದಿಯುವ ಎಣ್ಣೆಗೆ ಕೈ ಹಾಕಿಸಿದರು!