‘ಒಂದು ರಾಷ್ಟ್ರ – ಒಂದು ಚುನಾವಣೆ’: ಪ್ರಧಾನಿ ಮೋದಿ ಹೇಳಿದ ಆ ಮಾತಿನ ಮರ್ಮವೇನು..?
‘ಒಂದು ರಾಷ್ಟ್ರ – ಒಂದು ಚುನಾವಣೆ’ ತಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಪದೇ-ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆ ಸೃಷ್ಟಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ರಾಜಕೀಯ ಸ್ಥಿರತೆಯನ್ನು ಹೆಚ್ಚಿಸುತ್ತದೆ” ಎಂದು ಹೇಳಿದ್ದಾರೆ.
ಪ್ರತಿ ಮೂರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುತ್ತಿವೆ. ಅಭಿವೃದ್ಧಿ ಯೋಜನೆಗಳನ್ನು ಚುನಾವಣೆಯೊಂದಿಗೆ ಜೋಡಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth