ಆನ್‍ಲೈನ್ ಗೇಮ್‌ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ - Mahanayaka
10:09 PM Thursday 19 - September 2024

ಆನ್‍ಲೈನ್ ಗೇಮ್‌ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

supreme court
29/03/2022

ನವದೆಹಲಿ: ರಮ್ಮಿ, ಡ್ರೀಮ್ 11 ಸೇರಿದಂತೆ ಆನ್‍ಲೈನ್ ಗೇಮ್‌ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್ ಆದೇಶದ ವಿರುದ್ಧ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಶುಭ್ರಾಂಶು ಪಡಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡಿದ್ದಾರೆ. ಬೆಟ್ಟಿಂಗ್‌ಗೆ ಅವಕಾಶ ನೀಡುವ ಆನ್‍ಲೈನ್ ಗೇಮ್‌ಗಳನ್ನು‌ ನಿಷೇಧಿಸುವುದಕ್ಕಾಗಿ ರಾಜ್ಯ ಸರ್ಕಾರ ಪೊಲೀಸ್ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ಮಾಡಿತ್ತು.

ಇದರನ್ವಯ ಡ್ರೀಮ್ 11, ರಮ್ಮಿ ಸೇರಿದಂತೆ ಬೆಟ್ಟಿಂಗ್ ಗೇಮಿಂಗ್ ಆ್ಯಪ್‌ಗಳನ್ನು ರಾಜ್ಯದಲ್ಲಿ 2021ರ ಅ. 5 ನಿರ್ಬಂಧಿಸಿತ್ತು. ಆನ್‍ಲೈನ್ ಗೇಮ್‌ನಲ್ಲಿ ಬೆಟ್ಟಿಂಗ್ ಆಡುವವರಿಗೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 1 ರೂ. ಯಿಂದ ಲಕ್ಷದವರೆಗೆ ದಂಡ ವಿಧಿಸಲು ನಿಯಮ ರೂಪಿಸಲಾಗಿತ್ತು.


Provided by

ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹಲವು ಆನ್‍ಲೈನ್ ಗೇಮಿಂಗ್ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋಗಿದ್ದವು, ಈ ತಿದ್ದುಪಡಿ ಮಾಡುವ ಅಧಿಕಾರ ರಾಜ್ಯ ಶಾಸಕಾಂಗ ಹೊಂದಿಲ್ಲ, ಇದು ಸುಪ್ರೀಂಕೋರ್ಟ್ ನಿಗದಿಪಡಿಸಿದ ಪೂರ್ವನಿದರ್ಶನಕ್ಕೆ ವಿರುದ್ಧವಾಗಿದೆ. ಸಂವಿಧಾನದ 14, 19(1) (ಜಿ), 21 ಮತ್ತು 301ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು.

ನಂತರ ಹೈಕೋರ್ಟ್ ಕಾಯ್ದೆಯ ಸೆಕ್ಷನ್ 2, 3, 6, 8 ಮತ್ತು 9 ಅನ್ನು ರದ್ದುಪಡಿಸಿ ರಾಜ್ಯ ಸರ್ಕಾರದ ತಿದ್ದುಪಡಿಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಂಧನ ಭೀತಿ ಎದುರಿಸುತ್ತಿರುವ ಸಚಿವ ಸೋಮಣ್ಣ: ಮಾ.30ರಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಪ್ರಭಾಕರ್ ಭಟ್

ಮತ್ತೆ ಪೆಟ್ರೋಲ್ ಡಿಸೇಲ್ ಏರಿಕೆ: ಇಂದು ಏರಿಕೆಯಾಗಿದ್ದು ಎಷ್ಟು?

ಅಕ್ಕನ ಬಾಯ್​ ಫ್ರೆಂಡ್​ ನಿಂದ ಬಾಲಕಿ ಮೇಲೆ ಅತ್ಯಾಚಾರ

ಇತ್ತೀಚಿನ ಸುದ್ದಿ