ಆನ್ ಲೈನ್ ಜೂಜು ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನ | ಸಚಿವ ಮಾಧುಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಜೂಜು ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದು, ಈ ಸಂಬಂಧ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಆನ್ ಲೈನ್ ಜೂಜು ನಿಷೇಧ ಸಂಬಂಧ ಚರ್ಚಿಸಲಾಗಿದ್ದು, ಆನ್ ಲೈನ್ ಗೇಮ್ ನಿಷೇಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲಿದೆ ಎಂದು ಅವರು ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಮಾಹಿತಿ ನೀಡಿದರು.
ಆನ್ ಲೈನ್ ಜೂಜು ನಿಷೇಧಿಸುವಂತೆ ಕೋರಿರುವ ಅರ್ಜಿಯ ವಿಚಾರಣೆ ನಡೆಸುತ್ತಿವ ಹೈಕೋರ್ಟ್ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಸೂಚಿಸಿತ್ತು. ಹಾಗಾಗಿ ಆನ್ ಲೈನ್ ಜೂಜು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಅವರು ತಿಳಿಸಿದರು.
ಹಣ ಹೂಡಿಕೆಯ ಆನ್ ಲೈನ್ ಆಟಗಳ ವಿರುದ್ಧ ಪೊಲೀಸ್ ಕಾಯ್ದೆಯಡಿಯಲ್ಲಿ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲು ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮಾಧುಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನಷ್ಟು ಸುದ್ದಿಗಳು…
ಹಾಸ್ಟೆಲ್ ನ ರಹಸ್ಯ ಮುಚ್ಚಿ ಹಾಕಲು ಅತ್ಯಾಚಾರದ ಕಥೆ ಕಟ್ಟಿದ ವಿದ್ಯಾರ್ಥಿನಿ?
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದಾಗಲಿ | ಸಿಪಿಐ(ಎಂ) ಒತ್ತಾಯ
ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ
ಸಾ.ರಾ.ಮಹೇಶ್ ಒಡೆತನದ ಜಾಗಗಳ ಮರು ಸರ್ವೇಗೆ ಆದೇಶ: ರೋಹಿಣಿ ಸಿಂಧೂರಿ ಆರೋಪಗಳಿಗೆ ಮರುಜೀವ
ಜನ್ಮ ನೀಡಿದ ತಂದೆಗೆ ನಡು ಬೀದಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಇಬ್ಬರು ಮಕ್ಕಳು!