ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದ ಒಂಟಿ ಮಹಿಳೆಯನ್ನು ಇರಿದು ಬರ್ಬರ ಹತ್ಯೆ!
ಮಂಡ್ಯ: ಮೆಡಿಕಲ್ ಸ್ಟೋರ್ ನಿಂದ ಮಧ್ಯಾಹ್ನ ಮನೆಗೆ ಊಟಕ್ಕೆಂದು ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.
45 ವರ್ಷ ವಯಸ್ಸಿನ ಪುಷ್ಪಲತಾ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪುಷ್ಪಲತಾ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರ ಕಿಕ್ಕೇರಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ಪುಷ್ಪಲತಾ, ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದಾರೆ. ಈ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಪುಷ್ಪಲತಾ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಮಹಿಳೆಯ ತಲೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಕಿಕ್ಕೇರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ!
ಸಾಯಿ ಪಲ್ಲವಿ ಸತ್ಯ ಹೇಳಿದ್ದಾರೆ ಎಂದ ನಟಿ ರಮ್ಯಾ!
ಕೋಣೆಯ ಕರ್ಟನ್ ಸರಿಪಡಿಸುತ್ತಿದ್ದ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
ಕರ್ತವ್ಯ ನಿರತ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!
ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ: ನಾಲಿಗೆ ಹರಿಯಬಿಟ್ಟ ಕಾಂಗ್ರೆಸ್ ನಾಯಕ