ರಾಜ್ಯದಲ್ಲಿ ಆಪರೇಷನ್ ಹಸ್ತ ಆರಂಭ? | ಬಿಜೆಪಿಯ ಮೊದಲ ವಿಕೆಟ್ ಪತನ? - Mahanayaka

ರಾಜ್ಯದಲ್ಲಿ ಆಪರೇಷನ್ ಹಸ್ತ ಆರಂಭ? | ಬಿಜೆಪಿಯ ಮೊದಲ ವಿಕೆಟ್ ಪತನ?

suresh gowda
28/09/2021

ತುಮಕೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಸದ್ದಿಲ್ಲದೇ ಆರಂಭವಾಗಿದೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿದೆ. ಇದೀಗ ಆಪರೇಷನ್ ಹಸ್ತಕ್ಕೆ ಬಿಜೆಪಿ ಮೊದಲ ವಿಕೆಟ್ ಪತನವಾಗಿದೆ ಎನ್ನುವ ವರದಿ ಬಂದಿದೆ. ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆನ್ನಲಾಗಿದ್ದು, ಇದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೀಡು ಮಾಡಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುರೇಶ್ ಗೌಡ ಅವರು, ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ ಸುಳಿವು ನೀಡಿದ್ದಾರೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಬಂಧಿಕರೂ ಆಗಿರುವ ಬಿ.ಸುರೇಶ್ ಗೌಡ ಕಾಂಗ್ರೆಸ್ ಗೆ ಸೇರ್ಪಡೆಗೊಂಡರೂ ಅಚ್ಚರಿಯಿಲ್ಲ ಎನ್ನುವ ಮಾತುಗಳು ಇದೀಗ ಕೇಳಿ ಬಂದಿವೆ.

ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಎರಡು ಬಾರಿ ಗೆಲುವು ಸಾಧಿಸಿರುವ ಸುರೇಶ್ ಗೌಡ ಅವರು,  ಮಾಜಿ ಸಿಎಂ, ಹಿರಿಯ ಬಿಜೆಪಿ ಮುಖಂಡ ಯಡಿಯೂರಪ್ಪನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು. ಯಡಿಯೂರಪ್ಪ ಪದ ತ್ಯಾಗದ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು.


Provided by

ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ನ್ನು ಹಗುರವಾಗಿ ಪರಿಗಣಿಸಿದ್ದಾರೆ. ಧರ್ಮದ ವಿಚಾರವೊಂದೇ ಚುನಾವಣೆ ಗೆಲ್ಲಲು ಸಾಕು ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಈ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಎಚ್ಚರಿಕೆ ನೀಡಿದ್ದರು, ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ, ಅವರಿಗೆ ಅವರದ್ದೇ ಆದ ಶಕ್ತಿ, ಸಾಮರ್ಥ್ಯ ಇರುತ್ತವೆ ಎಂದಿದ್ದರು.

ರಾಜ್ಯದಲ್ಲಿ ಕೇವಲ ಧರ್ಮ, ಮತಾಂತರ ಎಂಬ ಎರಡು ವಿಚಾರವನ್ನಿಟ್ಟುಕೊಂಡು ಚುನಾವಣೆ ಗೆಲ್ಲಬಹುದು ಎನ್ನುವ ಭ್ರಮೆಯಲ್ಲಿ ಬಿಜೆಪಿ ಇದೆ. ಆದರೆ, ಜನ ಸಾಮಾನ್ಯರ ಸಮಸ್ಯೆಗಳು ಮುಂದಿನ ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಿದೆ ಎನ್ನುವುದನ್ನು ರಾಜ್ಯ ಬಿಜೆಪಿ ಮರೆತಂತಿದೆ. ರಾಜ್ಯದಲ್ಲಿ ಸರ್ಕಾರ ಅನ್ನೋದು ಇದೆಯಾ ಎಂದು ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿಗಿಂತಲೂ ಪ್ರಬಲವಾಗಿ ಪಕ್ಷ ಸಂಘಟನೆ ಮಾಡುತ್ತಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ

ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ

ಬೆಂಗಳೂರಿನಲ್ಲಿ ಕುಸಿದು ಬಿತ್ತು ಮತ್ತೊಂದು 3 ಅಂತಸ್ತಿನ ಹಳೆಯ ಕಟ್ಟಡ!

ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್

ಭಾರತೀಯರಿಗೆ ಶಾಕಿಂಗ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ

ಶಾಕಿಂಗ್ ನ್ಯೂಸ್: ಸೈಬರ್ ಸೆಂಟರ್ ನಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡು: ದೇವಸ್ಥಾನ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ | ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ

ಇತ್ತೀಚಿನ ಸುದ್ದಿ