ಕುಂಭಮೇಳದಲ್ಲಿ ಕಾಲ್ತುಳಿತ: ಮೃತರ ಪಟ್ಟಿ ನೀಡುವಂತೆ ವಿಪಕ್ಷಗಳ ಪ್ರತಿಭಟನೆ - Mahanayaka

ಕುಂಭಮೇಳದಲ್ಲಿ ಕಾಲ್ತುಳಿತ: ಮೃತರ ಪಟ್ಟಿ ನೀಡುವಂತೆ ವಿಪಕ್ಷಗಳ ಪ್ರತಿಭಟನೆ

03/02/2025

ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ ನಡೆಸುವಂತೆ ಮತ್ತು ಮೃತಪಟ್ಟವರ ಪಟ್ಟಿ ನೀಡುವಂತೆ ಒತ್ತಾಯಿಸಿ ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ನಡೆಸಿದವು. ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವಾರು ಜನರು ಸಾವನ್ನಪ್ಪಿದ ಘಟನೆಯ ಬಗ್ಗೆ ತಕ್ಷಣದ ಚರ್ಚೆಗೆ ಸಭಾಧ್ಯಕ್ಷ ಜಗದೀಪ್‌ ಧನ್ಕರ್ ಒಪ್ಪದ ಕಾರಣ, ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸದನದಿಂದ ಹೊರ ನಡೆದರು.

ಬಜೆಟ್‌ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣ, ಬಜೆಟ್ ಮಂಡನೆ ಬಳಿಕ ಇಂದು ಕಲಾಪ ಪ್ರಾರಂಭಗೊಳ್ಳುತ್ತಿದ್ದಂತೆ, ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಎದ್ದು ನಿಂತು ಇತ್ತೀಚೆಗೆ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿ, ಸರ್ಕಾರದ ವಿರುದ್ದ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು.
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ, ವಿರೋಧ ಪಕ್ಷದ ಸಂದರು ಪ್ರಶ್ನೋತ್ತರ ಅವಧಿಯನ್ನು ಸ್ಥಗಿತಗೊಳಿಸುವಂತೆ ಮತ್ತು ಕಾಲ್ತುಳಿತದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದರು. ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಪೂರ್ಣ ಪಟ್ಟಿಯನ್ನು ಕೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಿರೋಧ ಪಕ್ಷದ ಸದಸ್ಯರ ನಡವಳಿಕೆಯನ್ನು ಖಂಡಿಸಿದರು. “ಇಂತಹ ಅಡ್ಡಿ ಮತ್ತು ಗದ್ದಲ ಒಳ್ಳೆಯದಲ್ಲ” ಎಂದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ