ಇಂದು ಪಾಟ್ನಾದಲ್ಲಿ ವಿಪಕ್ಷಗಳ ಸಭೆ: ಬಿಜೆಪಿಯನ್ನು ಸೋಲಿಸಿ ‘ಲೋಕ’ ಗೆಲ್ಲಲು ಕಾರ್ಯತಂತ್ರದ ಬಗ್ಗೆ ಚರ್ಚೆ
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ದೇಶದ ವಿರೋಧ ಪಕ್ಷಗಳ ನಾಯಕರು ಪಾಟ್ನಾದಲ್ಲಿಂದು ಸಭೆ ಸೇರಲು ಸಜ್ಜಾಗಿದ್ದಾರೆ.
ಇಂದಿರಾ ಗಾಂಧಿಯವರ ಬಹುಮತದ ಸರ್ಕಾರವನ್ನು ಉರುಳಿಸಿದ ಜಯಪ್ರಕಾಶ್ ನಾರಾಯಣ್ ಅವರ 1974 ರ ಸಂಪೂರ್ಣ ಕ್ರಾಂತಿಯ ಕರೆಯನ್ನು ಪ್ರತಿನಿಧಿಸುವುದರಿಂದ ಪ್ರತಿಪಕ್ಷಗಳು ಪಾಟ್ನಾವನ್ನೇ ತಮ್ಮ ಸಭೆಗೆ ಸ್ಥಳವಾಗಿ ಆಯ್ಕೆ ಮಾಡಿಕೊಂಡವು. ಬಿಜೆಪಿಯನ್ನು ಎದುರಿಸಲು ಏಕೀಕೃತ ವಿರೋಧ ರಂಗವನ್ನು ರೂಪಿಸಲು ಒಮ್ಮತಕ್ಕೆ ಬರುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಸಭೆಯನ್ನು ಆಯೋಜಿಸಿದ್ದಾರೆ.
ಹಲವಾರು ವಿರೋಧ ಪಕ್ಷಗಳ ನಾಯಕರು ಗುರುವಾರ ಪಾಟ್ನಾಕ್ಕೆ ಆಗಮಿಸಿದ್ದಾರೆ. ರಾಷ್ಟ್ರೀಯ ಲೋಕ ದಳ ಅಧ್ಯಕ್ಷ ಜಯಂತ್ ಚೌಧರಿ ಅವರು ಪೂರ್ವನಿರ್ಧರಿತ ಕುಟುಂಬ ಕಾರ್ಯಕ್ರಮದಿಂದಾಗಿ ಸಮಾವೇಶದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಆದಾಗ್ಯೂ ಈ ಸಭೆ “ಪ್ರತಿಪಕ್ಷಗಳ ಏಕತೆಯ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ” ಎಂದು ಚೌಧರಿ ಆಶಿಸಿದ್ದಾರೆ.
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂದು ಸಭೆಯ ಆತಿಥ್ಯ ವಹಿಸಿರುವ ಜನತಾದಳ (ಯುನೈಟೆಡ್) ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ.
ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಈ ಸಭೆಯನ್ನು ಕರೆದಿದ್ದು, ಬಿಜೆಪಿಯನ್ನು ವಿರೋಧಿಸುವ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw