ಶಾಲಾ ವಾರ್ಷಿಕೋತ್ಸವದಲ್ಲಿ ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶ ಪ್ರದರ್ಶನಕ್ಕೆ ವಿರೋಧ

kanthara
09/12/2022

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಷದ ಮೂಲಕ ಪ್ರದರ್ಶಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ.

ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ. ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿನಿಮಾದಲ್ಲಿ ದೈವ ವೇಷ ಧರಿಸಿದರೆ, ತಪ್ಪಿಲ್ಲ, ವೇದಿಕೆಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ದೈವದ ಪಾತ್ರಗಳನ್ನು ಮಾಡಬಾರದು ಅಂತ ಹೇಳುತ್ತಿರುವುದು ಹಲವು ಗೊಂದಲಕ್ಕೂ ಕಾರಣವಾಗಿದೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version