ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಮಹಿಳೆಯ ಅಂಗಾಂಗ ದಾನ
ಚಿಕ್ಕಮಗಳೂರು: ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಮಹಿಳೆಯ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕಾಂಗ್ರೆಸ್ ಮಾಧ್ಯಮ ವಕ್ತಾರ, ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಮೊಸೆಸ್, ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದರು. ಕುಟುಂಬಸ್ಥರು ಅವರ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದು, ಈ ಮೂಲಕ ಸಹನಾ ಮೊಸೆಸ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಅಂಗಾಂಗಳನ್ನು ಬೆಂಗಳೂರು ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ. ಕಣ್ಣು, ಕಿಡ್ನಿ, ಲಿವರ್ ಸೇರಿದಂತೆ ಒಟ್ಟು ಐದು ಅಂಗಾಂಗಗಳನ್ನು ರವಾನೆ ಮಾಡಲಾಗಿದೆ.
ಒಂಬತ್ತು ತಿಂಗಳ ಹಿಂದೆಯಷ್ಟೇ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ರಕ್ಷಿತಾಬಾಯಿ ಎಂಬ ಯುವತಿಯ ಅಂಗಾಂಗಗಳನ್ನು ರವಾನೆ ಮಾಡಲಾಗಿತ್ತು. ಇದೀಗ ಸಹನಾ ಮೊಸೆಸ್ ಅವರ ಅಂಗಾಂಗಗಳನ್ನು ರವಾನೆ ಮಾಡಲಾಗಿದೆ. ಬೆಂಗಳೂರಿನ ಅಪೋಲೋ ಹಾಗೂ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಅಂಗಾಂಗಗಳನ್ನು ದಾನ ಮಾಡಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw