ಆಸ್ಕರ್ ಫೆರ್ನಾಂಡಿಸ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ | 1 ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ನಾಯಕ - Mahanayaka

ಆಸ್ಕರ್ ಫೆರ್ನಾಂಡಿಸ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ | 1 ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ನಾಯಕ

oscar fernandes
27/07/2021


Provided by

ಮಂಗಳೂರು: ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ನಸುಕಿನ ವೇಳೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ್ ಅವರ ತಲೆಗೆ ಬಿದ್ದ ತೀವ್ರ ಸ್ವರೂಪದ ಏಟಿನಿಂದಾಗಿ ಮೆದುಳಿನ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ರಕ್ತವನ್ನು ಹೊರ ತೆಗೆಯಲಾಗಿದೆ. ರಕ್ತ ಹೆಪ್ಪುಗಟ್ಟಿರುವುದನ್ನು ಹೊರತೆಗೆದ ಹಿನ್ನೆಲೆಯಲ್ಲಿ ಅವರಿಗೆ ಶೀಘ್ರವೇ ಪ್ರಜ್ಞೆ ಮರಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ಯೆನೆಪೊಯ ಆಸ್ಪತ್ರೆಯ ಡಾ. ದಿವಾಕರ್ ರಾವ್, ಡಾ ಸುನಿಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.

ಇತ್ತೀಚಿನ ಸುದ್ದಿ