ನಮ್ಮ ಹೋರಾಟ ಬ್ರಿಜ್ ಭೂಷಣ್ ವಿರುದ್ಧವೇ ಹೊರತು ಸರ್ಕಾರದ ವಿರುದ್ಧ ಅಲ್ಲ: ಕುಸ್ತಿಪಟು ಸಾಕ್ಷಿ ಮಲಿಕ್, ಸತ್ಯವರ್ತ್ ಕಡಿಯಾನ್
ತಮ್ಮದೇನಿದ್ದರೂ ಹೋರಾಟ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧವೇ ಹೊರತು ಕೇಂದ್ರ ಸರ್ಕಾರದ ವಿರುದ್ಧ ಅಲ್ಲ ಎಂದು ಭಾರತದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಅವರ ಪತಿ ಸತ್ಯವರ್ತ್ ಕಡಿಯಾನ್ ಶನಿವಾರ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸಾಕ್ಷಿ ಟ್ವಿಟರ್ ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು, ‘ಕಳೆದ ಕೆಲವು ದಿನಗಳಿಂದ ತಮ್ಮ ಸುತ್ತಲೂ ಸುತ್ತುತ್ತಿರುವ ವದಂತಿಗಳನ್ನು ಸ್ಪಷ್ಟಪಡಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕುಸ್ತಿ ಒಕ್ಕೂಟವನ್ನು ನಡೆಸುವಾಗ ಅವರು ಅನೇಕ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ನಮ್ಮ ವಿರುದ್ಧ ವದಂತಿಗಳನ್ನು ಹರಡಲಾಗುತ್ತಿದೆ. ಅಲ್ಲದೇ ಮಾಧ್ಯಮದ ಒಂದು ವಿಭಾಗವು ದಾರಿತಪ್ಪಿಸುವ ವರದಿಗಳನ್ನು ನೀಡುತ್ತಿದೆ. ನಮ್ಮ ಸತ್ಯವನ್ನು ಹಂಚಿಕೊಳ್ಳುವುದು ಈ ವೀಡಿಯೊದ ಉದ್ದೇಶ’ ಎಂದು ಸತ್ಯವರ್ತ್ ವೀಡಿಯೊದಲ್ಲಿ ಹೇಳಿದ್ದಾರೆ.
ಅನೇಕ ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ತಮ್ಮ ಹೋರಾಟ ಎಂದು ಸತ್ಯವರ್ತ್ ಹೇಳಿದರು.
‘ನಮ್ಮ ಹೋರಾಟವು ಸರ್ಕಾರದ ವಿರುದ್ಧವಲ್ಲ. ಆದರೆ ನಮ್ಮ ಹೋರಾಟ ಒಕ್ಕೂಟದ ಚುಕ್ಕಾಣಿ ಹಿಡಿದಿದ್ದಾಗ ಆಪಾದಿಸಲಾದ ಅಪರಾಧಗಳನ್ನು ಮಾಡಿದ ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಎಂದು ನಾವು ಅನೇಕ ಬಾರಿ ಹೇಳಿದ್ದೇವೆ” ಎಂದು ಸತ್ಯವರ್ತ್ ಹೇಳಿದರು.
ಕುಸ್ತಿಗೆ ಸಂಬಂಧಿಸಿದ ಸುಮಾರು 90 ಪ್ರತಿಶತದಷ್ಟು ಜನರಿಗೆ ‘ಕಳೆದ 10 ರಿಂದ 12 ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಮಾಡಲಾಗುತ್ತಿರುವ ಕಿರುಕುಳದ ಬಗ್ಗೆ ತಿಳಿದಿದೆ’ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw