ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಾಲನೆ ಮಾಡಲು ನೀಡಿದ ಮಾಲಿಕನಿಗೆ 25 ಸಾವಿರ ದಂಡ!

ಚಿಕ್ಕಮಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಾಲನೆ ಮಾಡಲು ನೀಡಿದ ವಾಹನ ಮಾಲೀಕನಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲಯ ಸ್ಕೂಟಿ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದೆ.
ದಿನಾಂಕ 4–4–2025ರಂದು ಮೂಡಿಗೆರೆ ಪಟ್ಟಣದಲ್ಲಿ ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿಯವರ ಸಮ್ಮುಖದಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಪ್ರಾಪ್ತ ಬಾಲಕನೋರ್ವ ಕೆಎ 18, ಇಸಿ 2707 ನಂಬರಿನ ಸ್ಕೂಟಿಯನ್ನು ಚಾಲನೆ ಮಾಡುತ್ತಿದ್ದು, ಪರಿಶೀಲನೆಯಿಂದ ತಿಳಿದುಬಂದಿತ್ತು.
ದಾಖಲೆಗಳನ್ನು ಪರಿಶೀಲಿಸಿದಾಗ ಸ್ಕೂಟಿಯು ಬಾಪುನಗರ ವಾಸಿ ಮಹಮ್ಮದ್ ಸಿರಾಜ್ ಎಂಬುವವರು ಸೇರಿದ್ದು ಎಂದು ತಿಳಿದುಬಂದಿತ್ತು.ಅಪ್ರಾಪ್ತನಿಗೆ ವಾಹನ ಚಾಲನೆ ಮಾಡಲು ನೀಡಿದ ಆರೋಪದಲ್ಲಿ ವಾಹನ ಮಾಲೀಕ ಮಹಮ್ಮದ್ ಸಿರಾಜ್ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲದ ನ್ಯಾಯಾಧೀಶರು ದಿನಾಂಕ 15—04–2025ರಂದು ವಾಹನ ಮಾಲೀಕ ಮಹಮ್ಮದ್ ಸಿರಾಜ್ ಅವರಿಗೆ 25 ಸಾವಿರ ದಂಡ ಹಾಕಿದ್ದಾರೆ.
ಇತ್ತೀಚೆಗೆ ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಅದರಲ್ಲೂ ದ್ವಿಚಕ್ರ ವಾಹನ ಚಾಲನೆ ಮಾಡುವುದು ಹೆಚ್ಚುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿದೆ. ಇದೀಗ ಮೂಡಿಗೆರೆ ನ್ಯಾಯಾಲಯ ನೀಡಿರುವ ತೀರ್ಪು ವಾಹನ ಮಾಲೀಕರಿಗೆ ಒಂದು ಪಾಠವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: