ಸ್ನೇಹಿತನಂತೆ ನಾಯಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋದ ಮಾಲಿಕ! - Mahanayaka
2:30 PM Wednesday 5 - February 2025

ಸ್ನೇಹಿತನಂತೆ ನಾಯಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋದ ಮಾಲಿಕ!

dog
30/12/2024

ಚಿಕ್ಕಮಗಳೂರು: ನಾಯಿಯನ್ನು ಬೈಕ್ ನಲ್ಲಿ ಸ್ನೇಹಿತನಂತೆ ಹಿಂದೆ ಕೂರಿಸಿಕೊಂಡು ವ್ಯಕ್ತಿಯೊಬ್ಬ ಪ್ರಯಾಣಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ನಡೆದಿದೆ.

ಮಾಲೀಕ ಸುಮಾರು 3 ಕಿ.ಮೀ, ವರೆಗೆ ನಾಯಿಯನ್ನ ಬೈಕ್ ನಲ್ಲಿ ನಿಲ್ಲಿಸಿಕೊಂಡು ಹೋಗಿದ್ದಾನೆ. ವೇಗವಾಗಿ ಹೋಗುತ್ತಿದ್ದ ಬೈಕ್ ನ ಹಿಂದೆ ನಾಯಿ ಬ್ಯಾಲೆನ್ಸ್ ಮಾಡಿಕೊಂಡು ನಿಂತು ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಬೈಕ್ ನ ಹಿಂದೆ ನಿಂತ ನಾಯಿ ಬೈಕ್ ಅತ್ತಿತ್ತ ವಾಲಾಡುತ್ತಿರು ವೇಳೆ ಮೂರು ಕಾಲಿನಲ್ಲಿ ನಿಂತು ಬ್ಯಾಲೆನ್ಸ್ ಕಾಯ್ದುಕೊಳ್ಳುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ನಾಯಿ ಬೈಕ್ ನಲ್ಲಿ ಬ್ಯಾಲೆನ್ಸ್ ಮಾಡುತ್ತಿರುವ ವಿಡಿಯೋವನ್ನ ವಾಹನವೊಂದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಿಡಿಯೋ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಬಳಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ