ಆಕ್ಸಿಜನ್ ಕೊಡೋಕೆ ಆಗದವರು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ ಟೀಕೆ
ಬೆಂಗಳೂರು: ಆಕ್ಸಿಜನ್ ಕೊಡೋಕೆ ಆಗದವರು ಈಗ ಯೋಗ ಮಾಡಲು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಪ್ರವಾಹ ಬಂದಾಗ ಪ್ರಧಾನಿ ಬರಲಿಲ್ಲ, ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ, ಈಗ ಅವರಿಗೆ ರಾಜ್ಯ ನೆನಪಾಗಿದೆ. ಆಕ್ಸಿಜನ್ ಕೊಡಲು ಆಗದವರು ಈಗ ಯೋಗ ಮಾಡಲು ಬಂದಿದ್ದಾರೆ ಎಂದು ಕುಟುಕಿದರು.
40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘ ದೂರು ನೀಡಿದರೂ, ಈವರೆಗೆ ಚೌಕಿದಾರ್ ಉತ್ತರ ನೀಡಿಲ್ಲ. ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಅವರ ಸರ್ಕಾರದಲ್ಲಿ ಕರ್ನಾಟಕವನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆಲ್ಲ ಪ್ರಧಾನಿ ಅನುಮತಿ ನೀಡಿದ್ದಾರಾ? ಎಂದು ಸಿದ್ದರಾಮಯ್ಯ ತರಾಟೆಗೆತ್ತಿಕೊಂಡಿದ್ದಾರೆ.
ಕೊವಿಡ್ ಸಮಯದಲ್ಲಿ ಸಾವಿರಾರು ಜನರು ಆಕ್ಸಿಜನ್ ಇಲ್ಲದೇ ಸತ್ತರು. ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದರು. ರಾಜ್ಯದ ಬೇರೆಡೆಗಳಲ್ಲಿಯೂ ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದರು. ಇದಕ್ಕೆಲ್ಲ ಇದೇ ಮೋದಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಧಾನಿ ಕೈಯಿಂದ ಗುದ್ದಿಸಿಕೊಂಡ ಶಾಸಕ ರಾಮ್ ದಾಸ್!
ತಾಯಿ ಕೋತಿಯನ್ನು ಬೇಟೆಯಾಡಿದ ಚಿರತೆ: ತಾಯಿ ಎದೆ ಅಪ್ಪಿಕೊಂಡೇ ಇದ್ದ ಮರಿ ಕೋತಿ
ಪ್ರವಾಹ ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸರು ಸಾವು!
ಇನ್ನೇನು ಅಂತ್ಯಕ್ರಿಯೆ ಮಾಡಬೇಕು ಅನ್ನೋವಷ್ಟರಲ್ಲಿ ಎಣ್ಣೆ ಹೊಡೆದು ತೂರಾಡುತ್ತಾ ಬಂದ ಸತ್ತ ವ್ಯಕ್ತಿ!
ಸಿದ್ದರಾಮಯ್ಯ ರೋಹಿತ್ ಚಕ್ರ ತೀರ್ಥನ ಬಂಧನಕ್ಕೆ ಕರೆ ನೀಡಿದ್ದು ಅಸಂವಿಧಾನಿಕ: ನಟ ಚೇತನ್