ಕರಾವಳಿಯ ದಲಿತ ಚಳುವಳಿಯ ನಾಯಕ ಪಿ. ಡೀಕಯ್ಯ ಆರೋಗ್ಯ  ಸ್ಥಿತಿ ಗಂಭೀರ - Mahanayaka

ಕರಾವಳಿಯ ದಲಿತ ಚಳುವಳಿಯ ನಾಯಕ ಪಿ. ಡೀಕಯ್ಯ ಆರೋಗ್ಯ  ಸ್ಥಿತಿ ಗಂಭೀರ

dikayya
07/07/2022

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ಓರ್ವರಾದ ಪಿ. ಡೀಕಯ್ಯರವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಮಣಿಪಾಲದ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯದ ಮಾಹಿತಿಗಳ ಪ್ರಕಾರ ಮನೆಯಲ್ಲಿ ಆಯತಪ್ಪಿ ಬಿದ್ದ ಪರಿಣಾಮ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ಮೆದುಳಿನ ರಕ್ತಸ್ರಾವದಿಂದಾಗಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಮೆದುಳಿನ ರಕ್ತಸ್ರಾವದ ಪರಿಣಾಮ ಡೀಕಯ್ಯನವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಡೀಕಯ್ಯನವರ ಆರೋಗ್ಯ ಸ್ಥಿತಿಯ ಬಗ್ಗೆ ಅವರ ಅನುಯಾಯಿಗಳು, ಚಳುವಳಿಯ ಒಡನಾಡಿಗಳು ಆತಂಕಿತರಾಗಿದ್ದು, ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ