ಬಹುಜನ ಚಳುವಳಿಗೆ ಭಾರೀ ನಷ್ಟ: ಪಿ.ಡೀಕಯ್ಯ ಇನ್ನಿಲ್ಲ: ಸಾವಿನಲ್ಲೂ ಸಾರ್ಥಕತೆ ಮೆರೆದ ನಾಯಕ
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯನವರು ನಿನ್ನೆ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.
ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರು, ತಮ್ಮ ಬಹು ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ಪದ್ಮುಂಜದಲ್ಲಿರುವ ಅವರ ನಿವಾಸದ ಬಳಿ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸಿದ ಪಿ.ಡೀಕಯ್ಯನವರು, ದೇಶದ ಇತಿಹಾಸದ ಜೊತೆಗೆ ತುಳುನಾಡಿನ ಇತಿಹಾಸವನ್ನೂ ಅರೆದು ಕುಡಿದಿದ್ದರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಯುವಕರಲ್ಲಿ ಬಹುಜನ ಚಳುವಳಿಯನ್ನು ತುಂಬಿ, ಸಾಕಷ್ಟು ನಾಯಕರನ್ನು ಸೃಷ್ಟಿಸಿದ್ದರು.
ಕಾನದ ಕಟದರ ಇತಿಹಾಸದ ಕುರಿತು ಅಧ್ಯಯನ ಮಾಡಿ ಪುಸ್ತಕ ಬರೆದಿದ್ದ, ಡೀಕಯ್ಯರು ಅಪ್ರತಿಮ ಬರಹಗಾರರು ಕೂಡ ಆಗಿದ್ದರು. ಮನುವಾದದ ಕಡು ವಿರೋಧಿಯಾಗಿದ್ದ ಡೀಕಯ್ಯರು, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.
ಪಿ.ಡೀಕಯ್ಯನವರ ಅಕಾಲಿಕ ನಿಧನದಿಂದ ಅವರ ಅಭಿಮಾನಿಗಳು, ಹಿತೈಷಿಗಳು ತೀವ್ರವಾಗಿ ದುಃಖಿತರಾಗಿದ್ದಾರೆ. ಸಾಕಷ್ಟು ಹೋರಾಟಗಳಿಗೆ ಮಾರ್ಗದರ್ಶಕರಾಗಿದ್ದ ಪಿ.ಡೀಕಯ್ಯನವರ ನಿಧನದಿಂದ ಬಹುಜನ ಚಳುವಳಿಗೆ ಭಾರೀ ನಷ್ಟವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka