ಭೀಮಾ ಕೋರೆಗಾಂವ್ ಪ್ರಕರಣದ ಪಿ.ವರವರ ರಾವ್ ಜಾಮೀನು ಮುಂದುವರಿಕೆ
ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಪಿ.ವರವರ ರಾವ್ ಅವರು ವೈದ್ಯಕೀಯ ಕಾರಣಗಳಿಗಾಗಿ ನಿಯಮಿತ ಜಾಮೀನು ಕೋರಿ ಸಲ್ಲಿಸಿರುವ ಮನವಿಯ ಮೇರೆಗೆ ಸುಪ್ರಿಂ ಕೋರ್ಟ್ ಮಂಗಳವಾರ ಎನ್ ಐಎಗೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಮುಂದಿನ ವಿಚಾರಣೆಗೆ ಆಗಸ್ಟ್ 10ಕ್ಕೆ ಸಮಯ ನಿಗದಿ ಮಾಡಿದೆ. ಪ್ರಸ್ತುತ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲಿರುವ ಅವರು ಜುಲೈ 12 ರಂದು ಶರಣಾಗಬೇಕಿತ್ತು. ಸದ್ಯ ಸುಪ್ರಿಂಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದೆ.
2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ವರವರ ರಾವ್ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಇದರಿಂದ ಮರುದಿನ ಮಹಾರಾಷ್ಟ್ರ ದ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಆರೋಪಿಸಿ ಪೊಲಿಸರು ವರವರರಾವ್ ರ ಅವರನ್ನು ಬಂಧಿಸಿದ್ದರು.
83 ವರ್ಷದ ವರವರ ರಾವ್ ಅವರು ಸಲ್ಲಿಸಿದ್ದ ಶಾಶ್ವತ ವೈದ್ಯಕೀಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು, ಅದನ್ನು ಸುಪ್ರಿಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka