ಪಿಕಪ್ ವಾಹನ ಡಿಕ್ಕಿ ಹೊಡೆದು ಪಾದಚಾರಿಯ ದಾರುಣ ಸಾವು

ಶಿರ್ವ: ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಅ.9ರಂದು ರಾತ್ರಿ ನಡೆದಿದೆ.
50 ವರ್ಷದ ಎವುಜಿನ್ ಬ್ರಿಟ್ಟೊ ಮೃತಪಟ್ಟ ಪಾದಚಾರಿ. ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ, ಬ್ರಿಟ್ಟೊ ಅವರು ಮೃತಪಟ್ಟಿದ್ದಾರುವುದನ್ನು ಖಾತರಿ ಪಡಿಸಿದ್ದಾರೆ. ಘಟನೆ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka