ಪಾದಚಾರಿಯ ಸಾವಿಗೆ ಕಾರಣವಾದ ಬೈಕ್ ಸವಾರನಿಗೆ 2 ವರ್ಷ ಜೈಲು, 10 ಸಾವಿರ ದಂಡ
ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018 ಡಿಸೆಂಬರ್ 17 ರಂದು ಮಧ್ಯಾಹ್ನ 3:50 ರ ಸುಮಾರಿಗೆ ಉಪ್ಪೂರಿನ ಮೂಡು ಅಮ್ಮುಂಜೆಯ ಆಶಿಶ್ ಶೆಟ್ಟಿ ಎಂಬಾತನು ಉಡುಪಿ ತಾಲೂಕು ಪುತ್ತೂರು ಗ್ರಾಮದ ಜಂಕ್ಷನ್ ಬಸ್ ನಿಲ್ದಾಣದ ಬಳಿ ದುಡುಕು, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ರಸ್ತೆ ಬದಿ ನಿಂತಿದ್ದ ನಾಗೇಶ್ ಡಿ ಪ್ರಭು ಎಂಬುವರಿಗೆ ಡಿಕ್ಕಿ ಹೊಡೆದ ಪರಿಣಾಮ, ನಾಗೇಶ್ ಡಿ ಪ್ರಭು ಅವರು ರಸ್ತೆಗೆ ಎಸೆಯಲ್ಪಟ್ಟು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಗಾಯಗೊಂಡು ಮೃತಪಟ್ಟಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಆಶಿಶ್ ಶೆಟ್ಟಿಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka