ಪಡೀಲ್- ಕುಲಶೇಖರ ಜೋಡಿ ರೈಲು ಮಾರ್ಗ ಕಾಮಗಾರಿ: ಮಾರ್ಚ್​ 20ರವರೆಗೆ  ರೈಲು ಸಂಚಾರ ಸ್ಥಗಿತ - Mahanayaka

ಪಡೀಲ್- ಕುಲಶೇಖರ ಜೋಡಿ ರೈಲು ಮಾರ್ಗ ಕಾಮಗಾರಿ: ಮಾರ್ಚ್​ 20ರವರೆಗೆ  ರೈಲು ಸಂಚಾರ ಸ್ಥಗಿತ

mangalore central
17/03/2022

ದಕ್ಷಿಣ ಕನ್ನಡ: ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುವ  ಹಿನ್ನಲೆಯಲ್ಲಿ ಇಂದಿನಿಂದ (ಮಾರ್ಚ್​ 17) 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ.

ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16575/16576) ಮಾರ್ಚ್​17 ರಿಂದ ಇರುವುದಿಲ್ಲ. ಯವಂತಪುರ-ಮಂಗಳೂರು ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್(16595/16596), ಯಶವಂತಪುರ-ಕಣ್ಣೂರು ಎಕ್ಸ್‌ಪ್ರೆಸ್(16511/16511), ಕೆಎಸ್ ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ.

ಪುಣೆ- ಎರ್ನಾಕುಲಂ ಎಕ್ಸ್‌ ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಗುರುವಾರದಿಂದಲೇ ರೈಲು ಸಂಚಾರ ಸ್ಥಗಿತಗೊಂಡ ಕಾರಣ ಸಾರ್ವಜನಿಕರು ಪರದಾಡುವಂತೆ ಮಾಡಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಲಕಿಯ  ಮೇಲೆ ಲೈಂಗಿಕ ದೌರ್ಜನ್ಯ: ಪಾದ್ರಿಯ  ಬಂಧನ

ಹೊಳೆಗೆ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಅಧಿಕ ಮಂದಿಗೆ ಗಾಯ

ಮಲಬದ್ಧತೆ ಸಮಸ್ಯೆ, ಕೂದಲಿನ ಬೆಳವಣಿಗೆಗೆ ಅಗಸೆ ಬೀಜ ಪ್ರಯೋಜನಕಾರಿ

ಆನೆ ಹಾವಳಿ: ತಮ್ಮದೇ ಸಚಿವರ ವಿರುದ್ಧವೇ ಬಿಜೆಪಿ ಶಾಸಕ ಆಕ್ರೋಶ

ಇತ್ತೀಚಿನ ಸುದ್ದಿ